
ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಇಂದು ವಿಕಾಸಸೌಧದಲ್ಲಿ, ಕಲಬುರಗಿ ಜಿಲ್ಲೆಯ ಮಳಕೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ರಾಜ್ಯ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಶ್ರೀ ರಾಥೋಡ್, ಅಪರ ನಿರ್ದೇಶಕರಾದ ಶ್ರೀ ನಂಜಪ್ಪ ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಎಚ್.ಆರ್ ಮ್ಯಾನೇಜರ್ ಆದಂತಹ ಶ್ರೀ ನಾರಾಯಣ್, ಕಾರ್ಮಿಕ ಇಲಾಖೆ ಅಧಿಕಾರಿಗಳು, ರಾಜಶ್ರೀ ಸಿಮೆಂಟ್ ಕಾರ್ಖಾನೆಯ ನೌಕರರು ಈ ಪಾಲ್ಗೊಂಡಿದ್ದರು.









