• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೌಡ್ಯ ತುಂಬಿಕೊಂಡವರು ವಿವಿಗಳಿಂದ ಹೊರಬಂದರೆ ಏನು ಪ್ರಯೋಜನ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.

ADVERTISEMENT

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸೋಮವಾರ (ಆಗಸ್ಟ್ 21) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ, ಆರ್ಥಿಕವಾಗಿ ಮತ್ತು ನಾಗರಿಕವಾಗಿ ಮುನ್ನಡೆಸುವ ಪದವೀಧರರನ್ನು ವಿಶ್ವ ವಿದ್ಯಾಲಯಗಳು ಸಜ್ಜುಗೊಳಿಸಬೇಕು. ಅದನ್ನು ಬಿಟ್ಟು ಕೇವಲ ಮೌಡ್ಯಗಳನ್ನು ತುಂಬಿಕೊಂಡು ಹೊರಗೆ ಬಂದರೆ ಅದರಿಂದ ದೇಶಕ್ಕೂ ಉಪಯೋಗವಿಲ್ಲ. ನಾಡಿಗೂ ಪ್ರಯೋಜನವಿಲ್ಲ. ಪದವೀಧರರ ಭವಿಷ್ಯಕ್ಕೂ ಉಪಯೋಗವಿಲ್ಲ ಎಂದರು.

ಜಿಇಆರ್ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಾದ ಚಾಮರಾಜನಗರ, ಯಾದಗಿರಿ, ಹಾಸನ, ಕೊಪ್ಪಳ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಮತ್ತು ಸಂಶೋಧನೆಗಳನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದ ಅತ್ಯಂತ ಹಳೆಯ ಮತ್ತು ಮೊದಲ ವಿವಿ ಆಗಿರುವ ಮೈಸೂರು ವಿವಿಯ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಕರ್ನಾಟಕ ರಾಜ್ಯದ ನಿವ್ವಳ ನೋಂದಣಿ ಅನುಪಾತ (ಜಿಇಆರ್) 36 % ಇದೆ. ರಾಷ್ಟ್ರೀಯ ಜಿಇಆರ್ 27.4%, 2030ರ ವೇಳೆಗೆ GER ಶೇ. 50ಕ್ಕೆ ಹೆಚ್ಚಿಸುವ ಗುರಿ ಇದೆ. ಪುರುಷರ GER- 34.8%, ಮಹಿಳೆಯರು- 37.2%, ಪರಿಶಿಷ್ಟ ಜಾತಿ- 25.6% ಮತ್ತು ಪರಿಶಿಷ್ಟ ಪಂಗಡ- 23.4% ಇದೆ. ರಾಜ್ಯದ 32 ಸಾರ್ವಜನಿಕ ವಿವಿಗಳಲ್ಲಿ 1.31 ಲಕ್ಷ ವಿದ್ಯಾರ್ಥಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ರಾಜ್ಯದ 32 ಸಾರ್ವಜನಿಕ ವಿವಿಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags: CM SiddaramaiahUniversityvidhanasoudhaಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವವಿದ್ಯಾಲಯ
Previous Post

ಜಮ್ಮು ಮತ್ತು ಕಾಶ್ಮೀರ | ಪುಲ್ವಾಮಾ ಬಳಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಓಬ್ಬ ಭಯೋತ್ಪಾದಕ ಹತ್ಯೆ

Next Post

ಚಂದ್ರನ ಅಂಗಳ ಸ್ಪರ್ಶಿಸಲಿರುವ ಚಂದ್ರಯಾನ 3ರ ಸಮಯದಲ್ಲೇ ʼರಾನಿʼ ಚಿತ್ರದ ಹಿಂದಿ ಟೀಸರ್ ಬಿಡುಗಡೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ರಾನಿ

ಚಂದ್ರನ ಅಂಗಳ ಸ್ಪರ್ಶಿಸಲಿರುವ ಚಂದ್ರಯಾನ 3ರ ಸಮಯದಲ್ಲೇ ʼರಾನಿʼ ಚಿತ್ರದ ಹಿಂದಿ ಟೀಸರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada