• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 22, 2024
in Top Story, ರಾಜಕೀಯ
0
Share on WhatsAppShare on FacebookShare on Telegram

“ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ADVERTISEMENT

ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೆಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:

“ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದರು.

ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ” ಎಂದು ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ” ಎಂದರು.

ಗ್ಯಾರಂಟಿಯಿಂದ ಬೆಲೆ ಏರಿಕೆ ಮಾಡಿಲ್ಲ:

ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಕೇಳಿದಾಗ, “ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ. ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ” ಎಂದರು.

ಸೂರಜ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಕೇಳಿದಾಗ, “ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ” ಎಂದರು.

ಮಾಜಿ ಮೇಯರ್ ಗಳ ಸಮಿತಿ ರಚನೆ:

ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.

ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ.

ಬಿಬಿಎಂಪಿ ಚುನಾವಣೆ ಮಾಡುತ್ತೀರಾ ಎದು ಕೇಳಿದಾಗ, “ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದರು.

ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ:

ಅನಾರೋಗ್ಯದಿಂದ ವಿಧಿವಶರಾದ ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಚಿಕ್ಕ ವಯಸ್ಸಿನಿಂದ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಾ ಸುದೀರ್ಘ 60 ವರ್ಷಗಳ ಕಾಲ ಸಾಹಿತ್ಯ ಸೇವೆ ಸಲ್ಲಿಸಿರುವ ಕಮಲಾ ಹಂಪನಾ ಅವರ ಅಗಲಿಕೆ ಬಹಳ ನೋವು ತಂದಿದೆ. ಈ ಕುಟುಂಬದ ಜತೆ ನನಗೆ 50 ವರ್ಷಗಳ ಒಡನಾಟವಿದೆ. ಇವರ ಪುತ್ರ ಹರ್ಷ ಹಾಗೂ ನಾನು ಬಾಲ್ಯದಲ್ಲಿ ಒಟ್ಟಿಗೆ ಓದಿದವರು. ಕಮಲಾ ಹಂಪನಾ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವರ ಸಾಹಿತ್ಯ ಸೇವೆ ದಾಖಲೆಗಳಲ್ಲಿ ಉಳಿದುಕೊಂಡಿವೆ. ಅವರು ಬಹಳ ಧೈರ್ಯದಿಂದ ಮಾತನಾಡುತ್ತಿದ್ದರು. ನಾವು ಈ ಕುಟುಂಬದ ಪರವಾಗಿದ್ದೇವೆ ಎಂದು ಧೈರ್ಯ ತುಂಬಲು ನಾನು ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅವರಿಗೆ ಏನೆಲ್ಲಾ ಗೌರವ ಸಲ್ಲಿಸಬಹುದೋ ಅದನ್ನು ಸಲ್ಲಿಸುತ್ತೇವೆ” ಎಂದರು.

Tags: BJPCongress PartyDKSivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಂಧ್ರದಲ್ಲಿ ಜಗನ್ ಪಕ್ಷಕ್ಕೆ (Jagan’s party)ಶಾಕ್‌: ಬೆಳ್ಳಂಬೆಳಗ್ಗೆ ವೈಎಸ್ಆರ್‌ಸಿಪಿ ಪಕ್ಷದ (YSRCP Party Office) ಕಚೇರಿ ಧ್ವಂಸಗೊಳಿಸಿದ ಸ್ಥಳೀಯಾಡಳಿತ.

Next Post

ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada