• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ “ಕೈ” ಕೊಟ್ಟಿತಾ ಕಾಂಗ್ರೆಸ್..?

ಸರ್ಕಾರಗಳು ಈ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡದಿರುವುದು ಯುವ ಶಕ್ತಿಯ ಪಿತ್ತ ನೆತ್ತಿಗೇರಲು ಕಾರಣವಾಗಿದೆ. ನೇಮಕಾತಿಗೆ ಮುಂದಾಗದಿದ್ರೆ ಜನಪ್ರತಿನಿಧಿಗಳ ವಿರುದ್ಧ ತಿರುಗಿ ಬೀಳುವ ದಿನಗಳು ದೂರವಿಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ “ಕೈ” ಕೊಟ್ಟಿತಾ ಕಾಂಗ್ರೆಸ್..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಸರ್ಕಾರದ ವಿರುದ್ಧ ಉದೋಗದ ಹಕ್ಕಿಗಾಗಿ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ನೇಮಕಾತಿ ನಡೆದಿಲ್ಲ. ಕೇವಲ ಅರ್ಜಿ ಕರೆದು ಹಣವನ್ನು ಲೂಟಿ ಹೊಡೆಯುವ ಮಾರ್ಗವನ್ನು ರಾಜ್ಯ ಸರ್ಕಾರ ಕಂಡುಕೊಂಡಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರುತ್ತಿದ್ದಾರೆ.

ADVERTISEMENT
GC Chandrashekhar on sudhamurthy : ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಗರ್ಜಿಸಿದ ಜಿ.ಸಿ. ಚಂದ್ರಶೇಖರ್! #sudhamurthy

ಈಗಾಗಲೇ ಒಂದು ಬಾರಿ ಬೀದಿಗಿಳಿದಿದ್ದ ಸ್ಪರ್ಧಾರ್ಥಿಗಳು ತಾಳ್ಮೆಯನ್ನು ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೆಂದರೆ ನಿನ್ನೆಯಷ್ಟೇ ನಡೆದಿರುವ ಇನ್ನೊಂದು ಸ್ವರೂಪದ ಬೃಹತ್‌ ಹೋರಾಟ. ವಿದ್ಯಾಕಾಶಿ ಧಾರವಾಡದಲ್ಲಿ ಹೋರಾಟದ ಕಿಚ್ಚೆಬ್ಬಿಸಿದ್ದ ವಿದ್ಯಾರ್ಥಿಗಳು ಪ್ರಮುಖ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮ್ಮ ಉದ್ಯೋಗದ ಹಕ್ಕಿಗಾಗಿ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವರ್ಷಾನುಗಟ್ಟಲೇ ಕಷ್ಟ ಪಟ್ಟು ಓದಿ, ಸಾಲ ಮಾಡಿ ಜೀವನ ಸಾಗಿಸುತ್ತಿರುವ ಸ್ಪರ್ಧಾರ್ಥಿಗಳ ಬದುಕು ತೀರ ಸಂಕಟದಾಯಕವಾಗಿದೆ. ಆದರೂ ಸರ್ಕಾರಗಳು ಈ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಕೆಲಸಕ್ಕೆ ಮುಂದಾಗದಿರುವುದು ಯುವ ಶಕ್ತಿಯ ಪಿತ್ತ ನೆತ್ತಿಗೇರಲು ಕಾರಣವಾಗಿದೆ.

ಇದನ್ನೂ ಓದಿ : ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !

ಇನ್ನೂ ಇದೇ ಹೋರಾಟವನ್ನು ಮುಂದಿಟ್ಟುಕೊಂಡು ಫುಲ್‌ ಟೈಂ ರಾಜಕಾರಣಿಗಳು ಕೆಸರೆರಚಾಟಕ್ಕೆ ಮುಂದಾಗಿದ್ದಾರೆ. ಇಂದಿನ ಈ ದುಸ್ಥಿತಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ 2019ರಿಂದ 2023ರವರೆಗಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಕಾರಣ. ಇದು ಯುವಜನರು ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದ್ದು ಮಾತ್ರವಲ್ಲ, ದೊಡ್ಡ ಪ್ರಮಾಣದ ಖಾಲಿ ಹುದ್ದೆಗಳ ಸೃಷ್ಟಿಗೆ ಕಾರಣವಾಯಿತು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ಬಿಜೆಪಿಯ ಮೇಲೆ ಆರೋಪಿಸಿದ್ದಾರೆ.

Karnataka: Job aspirants protest recruitment delays, CM Siddaramaiah blames BJP

ಇನ್ನೂ ಮೂರು ವರ್ಷಗಳಲ್ಲಿ ಸರ್ಕಾರಿ ನೇಮಕಾತಿಯತ್ತ ಗಮನಹರಿಸದೆ, ಯುವಕರಿಗೆ ದ್ರೋಹ ಬಗೆದಿರುವ ಮಹಾ ಸುಳ್ಳುಗಾರ ಸಿದ್ದರಾಮಯ್ಯ ಎಂದು ಬಿಜೆಪಿ ತಿರುಗೇಟು ನೀಡಿದೆ. ಆದರೆ ಈ ರಾಜಕೀಯ ನಾಟಕದಲ್ಲಿ ಬಲಿಪಶುವಾಗಿರುವುದು ಮಾತ್ರ ವಿದ್ಯಾರ್ಥಿಗಳೇ ಎನ್ನುವುದು ನಿಜಕ್ಕೂ ವಿಪರ್ಯಾಸ..!

ಅಲ್ಲದೆ ತಮ್ಮ ಅವಧಿಯಲ್ಲಿ 30 ಸಾವಿರ ಸರ್ಕಾರಿ ಹುದ್ದೆಗಳ ಮಾತಾಡುವ ಬಿಜೆಪಿಯು ಈ ಹೋರಾಟವನ್ನು ಹೈಜಾಕ್‌ ಮಾಡಲು ಯತ್ನಿಸುವ ವಿಫಲ ಪ್ರಯತ್ನ ಮಾಡಿದೆ. ಕಾಂಗ್ರೆಸ್‌ ಸರ್ಕಾರ ಬರುವ ಮುನ್ನ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಹಗರಣಗಳು ನಡೆದು ಆಗಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹಳಷ್ಟು ಅನ್ಯಾಯವಾಗಿದೆ. ಆಗ ಪಾರದರ್ಶಕ ನೇಮಕಾತಿಗೆ ಒತ್ತು ನೀಡದ ಬಿಜೆಪಿ ನಾಯಕರು ಈಗ ಯಾವ ನೈತಿಕತೆಯಿಂದ ಹೋರಾಟ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಮೂಡುತ್ತಿದೆ.

BJP accuses Karnataka CM Siddaramaiah of 'misleading' public on govt job figures - The Economic Times

ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರು ಆ ವೇಳೆ ವಿದ್ಯಾರ್ಥಿಗಳು ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಕೊರಳಲ್ಲಿದ್ದ ಬಿಜೆಪಿ ಶಾಲು ತೆಗೆದಿಟ್ಟು ಬನ್ನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಸನ್ನಿವೇಶವೂ ನಿರ್ಮಾಣವಾಗಿತ್ತು. ಶಾಸಕ ಅರವಿಂದ್‌ ಬೆಲ್ಲದ್‌ ಭಾಷಣಕ್ಕೆ ವಿದ್ಯಾರ್ಥಿಗಳು ಕಿಡಿಕಾರಿ, ಬಿಜೆಪಿ ನಾಯಕರಿಗೆ ಮುಜುಗರ ತಂದಿಟ್ಟ ಪ್ರಸಂಗವೂ ನಡೆಯಿತು.

Dharwad Students Protest: ಒಕ್ಕಲಿಗ ನಾಯಕನಿಗೆ ಕುರ್ಚಿ ಬಿಟ್ಟು ಕೊಡಿ ಅಂದದ್ಯಾಕೆ..? #pratidhvani

ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಧಾರವಾಡಕ್ಕೆ ಲಗ್ಗೆ ಇಟ್ಟಿದ್ದ ವಿದ್ಯಾರ್ಥಿಗಳು ತಮ್ಮ ಉದ್ಯೋಗದ ಹಕ್ಕಿಗಾಗಿ ಪ್ರತಿಪಾದನೆ ಮಾಡಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಅಕ್ಷರಶಃ ಇಡೀ ಕಾಂಗ್ರೆಸ್‌ ಸರ್ಕಾರವೇ ನಡುಗಿಹೋಗಿತ್ತು. ಆದರೆ ಈ ಹೋರಾಟದ ತೀವ್ರತೆ ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ನೇಮಕಾತಿಯ ಭರವಸೆ ನೀಡಿದ್ದಾರೆ.

ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿರುವೆ ಎಂದು ಕಿಡಿಕಾರಿದ್ದಾರೆ.
CM Siddaramaiah Pledges Faster Govt Recruitment, Blames BJP for Vacancies
ಇನ್ನೂ ತಮ್ಮ ಅವಧಿಯಲ್ಲಿ ನಡೆದ ನೇಮಕಾತಿ ಹಗರಣಗಳ ಬಗ್ಗೆಯೂ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆ ಇದೆ. ಭ್ರಷ್ಟಾಚಾರದ ಕೂಪವಾಗಿರುವ ಕೆಪಿಎಸ್‌ಸಿಯ ಬಗ್ಗೆ ಯಾವುದೇ ಸರ್ಕಾರ ಗಂಭೀರವಾಗಿ ಯೋಚಿಸುತ್ತಿಲ್ಲ. ತಮ್ಮ ತಮ್ಮ ಲಾಭಕ್ಕಾಗಿ ಆ ಸಂಸ್ಥೆಯನ್ನು ಬಳಸಿಕೊಳ್ಳುವುದನ್ನು ಬಿಟ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಯಾವೊಬ್ಬ ನಾಯಕನೂ ಮುಂದಾಗುತ್ತಿಲ್ಲ.
May be an image of ‎dais and ‎text that says '‎ಭರತా ಪತಿಧಟನ ت LOT‎'‎‎
ವಿದ್ಯಾರ್ಥಿಗಳ ಕಾಳಜೆ, ಸಾರ್ವಜನಿಕ ಸೇವಾ ಮನೋಭಾವದ ನಾಯಕರು ಈ ಬಗ್ಗೆ ಧ್ವನಿ ಎತ್ತದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಲ್ಲರೂ ಅಂತವರೇ ಎನ್ನುವ ಮನಸ್ಥಿತಿ ಯುವಕರಲ್ಲಿ ಬಂದಿದ್ದು, ಇಡೀ ಭ್ರಷ್ಟ ವ್ಯವಸ್ಥೆಯ ಬಗ್ಗೆ  ಕೋಪ ಒಳ ಒಳಗೆ ವಿದ್ಯಾರ್ಥಿಗಳ ಮನದಲ್ಲಿ ಕುದಿಯುತ್ತಿದೆ ಎನ್ನುವುದನ್ನು ಯಾವೊಬ್ಬ ರಾಜಕೀಯ ನಾಯಕನೂ ಮರೆಯಬಾರದು. ಯಾಕೆಂದರೆ ಯುವಶಕ್ತಿ ಅಣುಶಕ್ತಿಯಿದ್ದಂತೆ ಸ್ಫೋಟವಾದರೆ ಅದರ ಪರಿಣಾಮ ಊಹಿಸಲೂ ಸಾಧ್ಯವಾಗುವುದಿಲ್ಲ ಎಂಬ ಕಟು ಸತ್ಯವನ್ನು ಎಲ್ಲ ಜನಪ್ರತಿನಿಧಿಗಳು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ. ಹಾಗೆಯೇ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಯುವಕರಿಗೆ ನೀಡಿರುವ ಭರವಸೆಯನ್ನು ಎಷ್ಟರ ಮಟ್ಟಿಗೆ ಈಡೇರಿಸಿದೆ ಎನ್ನುವುದನ್ನು ಒಮ್ಮೆ ಅವಲೋಕಿಸಲಿ.
Tags: Araga JnanedraBAsavraja Bommaibjp karnatakaChalavadi Narayan SwamyCM SiddaramaiahCompitative Examscongress karnatakaCorrupt SystemDharawad newsDivya HagaragiDK ShivakumarKarnataka PoliticsKEAKPSC ScamPratidhvanipsi scamR AshokRecruitement ScamsStudent protestStudents Life
Previous Post

ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಪೊಲೀಸರು: ಆಗಿದ್ದೇನು..?

Next Post

ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!

Related Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?
Top Story

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

by ಪ್ರತಿಧ್ವನಿ
March 4, 2026
0

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ...

Read moreDetails
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
Next Post
ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!

ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada