ಗೋಧಿ ದರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಫ್ತು ನಿಷೇಧಿಸಿದ್ದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಗೋಧಿ ಬೆಲೆ ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲೇ ಅತೀ ಹೆಚ್ಚು ಗೋಧಿ ಬೆಳೆಯುವ ಭಾರತ ರಫ್ತು ನಿಷೇಧಿಸಿ ದರ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿತ್ತು.
ಯುರೋಪ್ ಮಾರುಕಟ್ಟೆಯಲ್ಲಿ ಗೋಧಿ ದರ ಕ್ವಿಂಟಲ್ ಗೆ 435 ಯುರೋಗೆ ಏರಿಕೆಯಾಗಿದೆ. ಅಂದರೆ ಜಾಗತಿಕ ಮಟ್ಟದಲ್ಲಿ ಗೋಧಿ ದರ ಶೇ.12ರಷ್ಟು ಜಿಗಿತ ಕಂಡಿದೆ.