ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿದ್ದು, ಕಳೆದ 8 ವರ್ಷಗಳ ಅವಧಿಯಲ್ಲಿ 845 ರೂ. ಏರಿಕೆ ಮಾಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಪುಷ್ಪ ಅಮರ್‌ನಾಥ್ ಕಿಡಿಕಾರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಜ್ವಲ ಯೋಜನೆ ಘೋಷಣೆ ಮಾಡಿತ್ತು. ಈ ಯೋಜನೆ ಎಷ್ಟು ಜನರಿಗೆ ತಲುಪಿದೆ ಎಂಬುದು ಒಂದು ಕಡೆಯಾದರೆ, ಮಹಿಳೆಯರು ಹೊಗೆರಹಿತ ಅಡುಗೆ ವ್ಯವಸ್ಥೆಯಲ್ಲಿ ಅಡುಗೆ ಮಾಡುವಲ್ಲಿ ಈ ಯೋಜನೆ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದೇ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದ್ದಾರೆ.
ಮಹಿಳೆಯರಿಗೆ ಅಚ್ಛೇ ದಿನ ಕೊಟ್ಟುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ವರ್ಷರ್ಷಗಳಲ್ಲಿ ಮಹಿಳೆಯರಿಗೆ ನಿರಂತರವಾಗಿ ಅಯಾಯ ಮಾಡಿಕೊಂಡು ಬಂದಿದೆ. ಈ ಅನ್ಯಾಯವನ್ನು ಕೇಳಿಸಿಕೊಳ್ಳುವ ಮುಖ್ಯಮಂತ್ರಿಗಳು ಇಲ್ಲವಾಗಿದ್ದಾರೆ. ಬಿಜೆಪಿ ಮಹಿಳಾ ನಾಯಕರು ಬೆಲೆ ಏರಿಕೆ ವಿಚಾರದಲ್ಲಿ ಯಾವಾಗ ಧ್ವನಿ ಎತ್ತುತ್ತಾರೆ? ಇನ್ನು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಅನಾಚಾರ ಹೆಚ್ಚಾಗುತ್ತಿದೆ ಎಂದು ಅರೋಪಿಸಿದ್ದಾರೆ.
ಇನ್ನು ಇತ್ತೀಚೆಗೆ ಆಸಿಡ್ ದಾಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೆ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ದಲಿತ ಕುಟುಂಬದ ಮೇಲೆ ದೌರ್ಜನ್ಯ ನಡೆದಾಗ ಆ ಬಗ್ಗೆ ಮಾತನಾಡಲಿಲ್ಲ ಹಾಗೂ ಆ ಕುಟುಂಬಕ್ಕೆ ನ್ಯಾಯ ಕೊಡಿಸಲು ಅಧಿಕಾರಿಗಳ ಜತೆ ಮಾತನಾಡಲಿಲ್ಲ.
ನಾನು ಬಿಜೆಪಿ ನಾಯಕಿಯರಾದ ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ, ಶಶಿಕಲಾ ಜೊಲ್ಲೆ, ತಾರಾ, ಮಾಳವಿಕ ಅವರನ್ನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಯುಪಿಎ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 10 ರೂ. ಹೆಚ್ಚಾದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿದ್ದಾರೆ? ಈಗ ಅವರು ಮಾತನಾಡಲು ಧೈರ್ಯ ಬರುತ್ತಿಲ್ಲವೇ? ಬೆಲೆ ಇಳಿಸಿ ಮಹಿಳೆಯರಿಗೆ ನರವಾಗಲು ಮನಸ್ಸಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಸರ್ಕಾರ ಸತ್ತು ಮಲಗಿದೆ. ಬಿಜೆಪಿಯ ಬೆಲೆ ಏರಿಕೆ ವಿರುದ್ಧ ನಾವು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಿದರೂ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದೆ. ಇದನ್ನು ನಾವು ಧಿಕ್ಕರಿಸಿ, ಸರ್ಕಾರದ ಬಳಿ ನ್ಯಾವನ್ನು ಆಗ್ರಹಿಸುತ್ತೇವೆ. ಸರ್ಕಾರ ಉಚಿತ ಸೌದೆ ಯೋಜನೆಯನ್ನು ಘೋಷಿಸಲಿ ಎಂದು ಆಗ್ರಹಿಸುತ್ತೇವೆ.
ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಮಧ್ಯಮವರ್ಗದ ಜನ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.
ಮಾಜಿ ಮೇಯರ್ ಪದ್ಮಾವತಿ ಮಾತನಾಡಿ, ಅಡುಗೆ ಅನಿಲ ಇಂದು 1112 ರೂ. ಆಗಿದೆ. ಕೇಂದ್ರ ಸರ್ಕಾರ ಉಜ್ವಲ ಯೋಜನೆ ತರುತ್ತೇವೆ ಎಂದು ಹೇಳಿದರು. ಈ ಯೋಜನೆ ಏನಾಯಿತು ಎಂದು ಈಗ ಹುಡುಕಬೇಕಾಗಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ ಪ್ರತಿ ಗ್ರಾಹಕರಿಂದ 200 ರೂ. ಸಂಗ್ರಹಿಸಿದರು. ಈ ಹಣ ಎಲ್ಲಿ ಹೊಯಿತು? ಎಲ್ಲ ಬಡ ಮಹಿಳೆಯರಿಗಗೆ ಈ ವ್ಯವಸ್ಥೆ ಸಿಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಪ್ರೆಟ್ಲೋ 111, ಡೀಸೆಲ್ 95, ಅಡುಗೆ ಅನಿಲ 112 ರೂ. ಆಗಿದೆ. ಜನ ಸಾಮಾನ್ಯರು ಕೋವಿಡ್ ಮಹಾಮಾರಿಯಿಂದ ಚೇತರಿಸಿಕೊಳ್ಳುವ ಹೊತ್ತಲ್ಲಿ ಈ ಬೆಲೆ ಏರಿಕೆಯಾಗಿದೆ. ಇನ್ನು ನೀರಿನ ಬಿಲ್ ಪ್ರಮಾಣ ಹೆಚ್ಚಾಗಿದ್ದು, ಪ್ರತಿ ಕುಟುಂಬ 800 ರೂ. ಕಟ್ಟಬೇಕಿದೆ. ವಿದ್ಯುತ್ ಬಿಲ್ ಕೂಡ ಏಕೆಯಾಗಿದೆ.
ಇನ್ನು ಧಾರಾಕಾರ ಮಳೆ ಬೀಳುತ್ತಿದೆ. 2016ರಲ್ಲೂ ಇದೇ ರೀತಿ ಧಾಖಲೆ ಪ್ರಮಾಣದ ಮಳೆಯಾಗಿತ್ತು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಮುತುವರ್ಜಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಇನ್ನು ಪಾಲಿಕೆಯಲ್ಲಿ ಎಲ್ಲ ಜನಪ್ರತಿನಿಧಿಗಳಿದ್ದರು, ಆಗ ಜನಪ್ರತಿನಿಧಿಗಳು ಜನರ ಮಧ್ಯೆ ಹೋಗಿ ಸಮಸ್ಯೆಗೆ ಸ್ಪಂಧಿಸಿದ್ದರು ಎಂದು ಹೇಳಿದ್ದಾರೆ.
ಇನ್ನು ರಸ್ತೆಗಳು ಹಾಳಾಗಿವೆ. ಇನ್ನು ರಾಜಾಜಿನಗರದಲ್ಲಿ ಮಾಡಲಾಗಿದ್ದ ರಸ್ತೆ ದುರಸ್ಥಿ ಕಾಮಗಾರಿ ಕೇವಲ 15 ದಿನಗಳಲ್ಲಿ ಹಾಳಾಗಿತ್ತು. ಸರ್ಕಾರ ಇನ್ನಾದರೂ ಎಚ್ಛೆತ್ತುಕಂಡು, ಮೂಲಭೂತ್ ಸೌಕರ್ಯ ನೀಡಬೇಕು. ಇನ್ನು ರಾಜ್ಯ ಸಚಿವ ಸಂಪುಟದಲ್ಲಿ ಕೇವಲ ಓರ್ವ ಮಹಿಳೆ ಇದ್ದು, ಅವರು ಕೂಡ ಸರ್ಕಾರದ ಮುಂದೆ ಮಹಿಳೆಯರ ಧ್ವನಿ ಎತ್ತುತ್ತಿಲ್ಲ ಎಂದು ಹೇಳಿದ್ದಾರೆ.