• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
May 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಕಾಪು ಮಾರಿಯಮ್ಮನವರ ದೇವಸ್ಥಾನಕ್ಕೆ ಸಚಿವರ ಭೇಟಿ

ADVERTISEMENT

ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಬೆಳಗಾವಿಯ ಸೊಸೆ ಸೋಫಿಯಾ ಖುರೇಷಿ, ಪಾಕಿಸ್ತಾನ ಮೇಲಿನ ಅಪರೇಷನ್ ಸಿಂಧೂರ್ ಕುರಿತು ಪ್ರತಿದಿನ ದೈನಂದಿನ ಚಟುವಟಿಕೆಗಳನ್ನು ಮಾಧ್ಯಮಗಳಿಗೆ ವಿವರಿಸುತ್ತಿದ್ದಾರೆ. ಇದು ನಿಜಕ್ಕೂ ಸಂತೋಷದ ವಿಚಾರ. ಅವರು ಕರ್ನಾಟಕದ ಹೆಮ್ಮೆಯ ಸೊಸೆ ಎಂದು ಹೇಳಿದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ನಾಳೆ ಉಡುಪಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಮತ್ತಷ್ಟು ಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಮಂದಿ ಸೈನಿಕರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಸಂದೇಶಗಳನ್ನು ಹರಡುತ್ತಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂಥ ಸಮಾಜ ಘಾತುಕ ಶಕ್ತಿಗಳು ಭಾರತದಲ್ಲಿ ಇರಬಾರದು ಎಂದು ಪ್ರತಿಕ್ರಿಯಿಸಿದರು.

  • ಲಿಂಗಾಯತ ಸಚಿವರಿಂದ ಒಮ್ಮತದ ತೀರ್ಮಾನ
    ಜಾತಿಗಣತಿಗೆ ಸಂಬಂಧಿಸಿದಂತೆ 7 ಜನ ಲಿಂಗಾಯತ ಸಚಿವರು ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಟ್ಟಾಗಿ ನಮ್ಮ ತೀರ್ಮಾನವನ್ನು ಒಂದು ಪತ್ರದಲ್ಲಿ ಬರೆದು ಎಲ್ಲರೂ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ನೀಡಲು ತೀರ್ಮಾನಿಸಿದ್ದೇವೆ ಎಂದು ಸಚಿವರು ಹೇಳಿದರು.
  • ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರಿಗೆ ಸನ್ಮಾನ

ಸಾವಿರ ಸೀಮೆಯ ಒಡತಿ ಎಂದೇ ಪೂಜಿಸಲ್ಪಡುವ ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ದ ಕಾಪು ಮಾರಿಯಮ್ಮನವರ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ನೀಡಿ, ದೇವರ ದರ್ಶನ ಪಡೆದರು. ಸ್ವರ್ಣ ಗದ್ದುಗೆ ಮೇಲೆ ಅಮ್ಮ ಕುಳಿತಿರುವುದನ್ನು ನೋಡಿದರೆ ನಮ್ಮ ಸಂಸ್ಕೃತಿ ಹಾಗೂ ಭಾರತದ ನಂಬಿಕೆ ನಿಜ ಎನಿಸುತ್ತದೆ ಎಂದು ಸಚಿವರು ಹೇಳಿದರು. ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ(Vasudeva Shetty), ಶಾಸಕ ಸುರೇಶ್ ಶೆಟ್ಟಿ ಗುರ್ಮೆ(MLA Suresh Shetty Gurme), ನಡಿಕೆರೆ ರತ್ನಾಕರ ಶೆಟ್ಟಿ, (Nadigere Rathnakara Shetty) ಉದಯ್ ಕುಮಾರ್ ಶೆಟ್ಟಿ(Uday Kumar Shetty), ದಿನೇಶ್ ಹೆಗಡೆ(Dinesh Hegade), ಸುನೀಲ್ ಬಂಗೇರ(Sunil Bangera), ನವೀನಚಂದ್ರ(Naveen Chandra) , ದೀಪಕ್ ಕೋಟ್ಯಾನ ಕಮಲ(Deepak Kotyana Kamala) ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: Dakshina KannadaDeepak Kotyana KamalaDinesh HegdeIndia PakistanKapuKapu Mariyamma TempleLakshmi hebbalkarMLA Suresh Shetty GurmeNadigere Rathnakara SHettyNaveen ChandraSunil BangeraUday Kumar ShettyUdupiVasudev Shetty
Previous Post

ಆಪರೇಷನ್ ಸಿಂಧೂರ್ ಕುರಿತು ಮೇಳ, ಇಎಫ್, ಸೇನೆಯಿಂದ ಜಂಟಿ

Next Post

ಅಮೆರಿಕ ಸಂಧಾನ.. ಕದನ ವಿರಾಮ ಘೋಷಿಸಿದ ಭಾರತ – ಪಾಕ್​..

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಅಮೆರಿಕ ಸಂಧಾನ.. ಕದನ ವಿರಾಮ ಘೋಷಿಸಿದ ಭಾರತ – ಪಾಕ್​..

ಅಮೆರಿಕ ಸಂಧಾನ.. ಕದನ ವಿರಾಮ ಘೋಷಿಸಿದ ಭಾರತ - ಪಾಕ್​..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada