ಚಿಕ್ಕೋಡಿ: ಸರ್ಕಾರಿ ಶಾಲೆಯಲ್ಲಿ (government school)ವಿದ್ಯಾರ್ಥಿನಿಗೆ ಲೈಂಗಿಕ sexual ಕಿರುಕುಳ ನೀಡಿರುವ ಪ್ರಕರಣವೊಂದು ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆ ಪೊಲೀಸರು (Chikkodi police station)ವಶಕ್ಕೆ ಪಡೆದಿದ್ದು, ಈತ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಬಾಲಕಿಯರು ಆರೋಪಿಸಿದ್ದಾರೆ.
ಶಿಕ್ಷಕ ಪ್ರತಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ. ಈತನ ಬಗ್ಗೆ ಈ ಹಿಂದೆಯೇ ದೂರುಗಳು ಕೇಳಿಬಂದಿತ್ತು. ಶುಕ್ರವಾರ ಸಂಜೆ ಶಾಲೆಯಿಂದ ಅಳುತ್ತಾ ಮರಳಿದ ಬಾಲಕಿಯೋರ್ವಳಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಕಾಮುಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂದು ತಿಳಿದುಬಂದಿದೆ. ಕೂಡಲೇ ರೊಚ್ಚಿಗೆದ್ದ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇತರೆ ವಿದ್ಯಾರ್ಥಿನಿಯರ ಪೋಷಕರೂ ಸಹ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಶಿಕ್ಷಕನ ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.