• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ: ಸಿ.ಎಂ.ಸಿದ್ದರಾಮಯ್ಯ!!

ಪ್ರತಿಧ್ವನಿ by ಪ್ರತಿಧ್ವನಿ
November 16, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ: ಸಿ.ಎಂ.ಸಿದ್ದರಾಮಯ್ಯ

ADVERTISEMENT

ಮೋದಿ ಏಕೆ ನನ್ನ‌ ಸವಾಲು ಸ್ವೀಕರಿಸುತ್ತಿಲ್ಲ. ಏನು ಭಯ ಅವರಿಗೆ: ಸಿಎಂ‌ ಪ್ರಶ್ನೆ, ಪತ್ರಿಕೆಗಳಿಗೆ ಸುಳ್ಳು ಜಾಹಿರಾತು ಪ್ರಕರಣ: ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸ್ತೀವಿ: ಸಿಎಂ ಘೋಷಣೆ

ಮಹಾರಾಷ್ಟ್ರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮಹಾರಾಷ್ಟ್ರದ ನಾನಾ ಕಡೆ ಚುನಾವಣಾ ಪ್ರಚಾರ ಪೂರೈಸಿದ ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿಯ ಹೈಲೈಟ್ಸ್ ಗಳು…ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ ಗೃಹಜ್ಯೋತಿ : ಒಂದು ಕೋಟಿ 62 ಸಾವಿರ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.

ಅನ್ನಭಾಗ್ಯ : ಒಂದು ಕೋಟಿ 20 ಸಾವಿರ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ

ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ತಿಂಗಳು 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ, ಯುವನಿಧಿ: ಸರ್ಕಾರ ಬಂದ 8 ತಿಂಗಳೊಳಗೆ ಇದೂ ಸೇರಿ ಎಲ್ಲಾ ಐದು ಗ್ಯಾರಂಟಿಗಳು ಆರಂಭವಾಗಿದ್ದು ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲಮೋ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ಸೇವೆ

ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ

ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ?

ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ

ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದ್ದರಿಂದ ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ಅನುಮಾನ ಬೇಡ ಮೋದಿ ಸರ್ಕಾರ ರೈತರ ಒಂದು ರೂಪಾಯಿ ಸಾಲವನ್ನೂ ಮನ್ನಾ ಮಾಡಲಿಲ್ಲ. ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮಾತ್ರ ಮನ್ನಾ ಮಾಡಿದೆ. ಆದ್ದರಿಂದ ಬಿಜೆಪಿ ಮತ್ತು ಮೋದಿ ಕೇವಲ ಅತ್ಯಂತ ಶ್ರೀಮಂತರ ಪರವಾಗಿದೆ ಎನ್ನುವುದು ಸಾಬೀತಾಗಿದೆ.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇನೆ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆದಾಗ ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ಆದ್ದರಿಂದ ಮಹಾರಾಷ್ಟ್ರ ಜನತೆ ಮಹಾ ವಿಕಾಸ್ ಅಘಾಡಿಯನ್ನು ಗೆಲ್ಲಿಸುವ ಮೂಲಕ ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮಹಾರಾಷ್ಟ್ರದ ಜನತೆಯ ಆರ್ಥಿಕ ಪ್ರಗತಿಗೆ ಕಾರಣರಾಗಬೇಕು ಎಂದು ವಿನಂತಿಸುತ್ತೇನೆ.

Tags: BJPCMCongress PartyKarnatakaMaharastraMaharastra Electionsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಲಿವುಡ್ ನಟ ಧನುಷ್ ವಿರುದ್ಧ ಲೆಟರ್ ಬರೆದ ನಯನತಾರಾ..!

Next Post

ಚೈತ್ರಾ ಅವರಿಗೆ ಕಿಚ್ಚನ ಖಡಕ್ ಕ್ಲಾಸ್ – ಬಿಗ್ ಬಾಸ್ ನಿಂದ ಹೊರಹೋಗಿತ್ತಿನಿ ಎಂದ ಚೈತ್ರಾ.!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಚೈತ್ರಾ ಅವರಿಗೆ ಕಿಚ್ಚನ ಖಡಕ್ ಕ್ಲಾಸ್ – ಬಿಗ್ ಬಾಸ್ ನಿಂದ ಹೊರಹೋಗಿತ್ತಿನಿ ಎಂದ ಚೈತ್ರಾ.!

ಚೈತ್ರಾ ಅವರಿಗೆ ಕಿಚ್ಚನ ಖಡಕ್ ಕ್ಲಾಸ್ - ಬಿಗ್ ಬಾಸ್ ನಿಂದ ಹೊರಹೋಗಿತ್ತಿನಿ ಎಂದ ಚೈತ್ರಾ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada