ರಾಜಧಾನಿ ಬೆಂಗಳೂರಿನಲ್ಲಿ (Bengaluru) 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ (Bengaluru airport) ಸದ್ಯ ಮೂರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.

ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಬಹುಶಿಸ್ತೀಯ ತಂಡ ಏಪ್ರಿಲ್ 7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್‌ಐಐಡಿಸಿ ವತಿಯಿಂದ 1.21 ಕೋಟಿ ರೂಪಾಯಿ ಶುಲ್ಕವನ್ನು ಪಾವತಿಸಲಾಗಿದೆ.ಅವರ ವರದಿಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಪೋಸ್ಟ್ ಮಾಡಿದ್ದಾರೆ.