ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ ಈ ಎಲ್ಲದರ ಮಧ್ಯೆ ಪ್ರಜ್ವಲ್ ರೇವಣ್ಣ ಹೊರದೇಶಕ್ಕೆ ತೆರಳಿರುವುದು ಇನ್ನೂ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.
ಮತದಾನದ ದಿನ ಏಕಾಂಗಿಯಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಅಲ್ಲಿಂದ ನೇರವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ತೆರಳಿರೋ ಮಾಹಿತಿ ಲಭ್ಯವಾಗಿದೆ ಬೆಂಗಳೂರಿನಿಂದ ಪ್ರಜ್ವಲ್ ಜರ್ಮನಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಅವರ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಬಂಧನದ ಭೀತಿಯಿಂದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದ್ದು ,ತಮ್ಮ ವಕೀಲರ ಮೂಲಕ ಮೊದಲು ಪ್ರಕರಣವನ್ನು ರದ್ದು ಕೋರಿ ಅರ್ಜಿ ಸಲ್ಲಿಸಲಾಗುತ್ತೆ . ಸಾಧ್ಯವಾಗದಿದ್ದರೆ ನಿರೀಕ್ಷಣಾ ಜಾಮೀನನ್ನ ಪಡೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತೆ. ನಂತರವಷ್ಟೇ ಪ್ರಜ್ವಲ್ ರಾಜ್ಯಕ್ಕೆ ಮರಳಿ ಎಸ್ಐಟಿ ತನಿಖೆಯನ್ನು ಎದುರಿಸಲಿದ್ದಾರೆ ಎನ್ನಲಾಗುತ್ತಿದೆ.