ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನಿಡಿದ್ದು, ಇಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ. ಉತ್ತರ ಒಳನಾಡಿನ ಕೆಲವು ಕಡೆ ಮಳೆ ಆಗಿದೆ ಎಂದಿದ್ದಾರೆ.
ಪ್ರಮುಖವಾಗಿ ಉತ್ತರ ಕನ್ನಡ 11 ಸೆ.ಮೀ, ಉಡುಪಿಯ 9 ಸೆ.ಮೀ, ಹಾವೇರಿ 10 ಸೆ.ಮೀ, ದಾವಣಗೆರೆ ಜಿಲ್ಲೆ 8 ಸೆ.ಮೀ ಮಳೆ ಆಗಿದೆ. ಈಗಿರುವ ಹವಾಮಾನ ಸ್ಥಿತಿ ಗಾಳಿಯ ಪರಿಚಲನೆ ತಮಿಳುನಾಡಿನ ಕರಾವಳಿ ತೀರದಲ್ಲಿ 5.8 ಕಿ.ಮೀ ಎತ್ತರದಲ್ಲಿ ಇದೆ. ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 23ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದಿದ್ದಾರೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
ಭಾರಿ ಮಳೆ ಹಿನ್ನಲೆ ಈ ಜಿಲ್ಲೆಗಳಿಗೆ ಅಕ್ಟೋಬರ್ 23ರ ವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 23ರ ವರೆಗೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.