• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ? : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನೆ

Any Mind by Any Mind
June 6, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ? : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ (congress) ನಾಯಕರು ಅನೇಕರು ಬಿಜೆಪಿ (BJP) ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ರಾಜ್ಯ (JDS OFFICE) ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿ H.D.ದೇವೇಗೌಡರು,

ADVERTISEMENT

ಮುಂಬರುವ ಲೋಕಸಭೆ ಚುನಾವಣೆಗೆ (LOKASABA election) ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಅಲ್ಲದೆ, ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ಮಾಜಿ ಪ್ರಧಾನಿಗಳ ಗಮನ ಸೆಳೆಯಲಾಯಿತು.

ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ ಎಂದು ಮರು ಪ್ರಶ್ನೆ ಹಾಕಿದ ಮಾಜಿ ಪ್ರಧಾನಿಗಳು, ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದರು.

ಅನೇಕ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಬಿಜೆಪಿ ಪಕ್ಷದ ಜತೆಗೆ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಅವರು ಖಾರಬಾಗಿ ಹೇಳಿದರು.

ಪಕ್ಷವನ್ನು ಸಂಘಟಿಸುತ್ತೇವೆ: ನಿಜ, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ. ಆಮೇಲೆ ಪಿನಿಕ್ಸಿನಂತೆ ಮೇಲೆದ್ದು ಬಂದಿದ್ದೇವೆ. ಈಗಲೂ ಅಷ್ಟೇ, ಸೋತಿದ್ದೇವೆ ಎಂದು ಮನೆಯಲ್ಲಿ ಕೂರಲಾರೆ. ಪಕ್ಷಕ್ಕಾಗಿ ಎಷ್ಟು ಕೆಲಸ ಮಾಡಲಿಕ್ಕೂ ನಾನು ತಯಾರಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು. ಆ ಬಗ್ಗೆ ಪಕ್ಷದಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಸಂಘಟನೆ ಕಡೆ ಒತ್ತು ನೀಡಲಾಗುತ್ತಿದೆ. ಇನ್ನು, ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಯಾವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

Tags: amithshahBJPbjpvscongresscmsiddaramiahCongress PartyDCM DK ShivakumarHD DevegowdaHD KumaraswamyHDKJDSJDS KarnatakakumaraswamylatestnewslatestnewstodayPMModipressmeetಬಿಜೆಪಿ
Previous Post

ಮುಖ್ಯಮಂತ್ರಿಗಳಿಂದ ಜನರನ್ನು ಎತ್ತಿಕಟ್ಟುವ ಆರೋಪ ; ಸಿಎಂಗೆ ತೀಕ್ಷ್ಣ ತಿರುಗೇಟು ಕೊಟ್ಟ HDK

Next Post

ಆಡಳಿತ ಯಂತ್ರಕ್ಕೆ ಮೇಜರ್​ ಸರ್ಜರಿ: 11 ಐಎಎಸ್​ ಅಧಿಕಾರಿಗಳ ವರ್ಗಾವಣೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಆಡಳಿತ ಯಂತ್ರಕ್ಕೆ ಮೇಜರ್​ ಸರ್ಜರಿ: 11 ಐಎಎಸ್​ ಅಧಿಕಾರಿಗಳ ವರ್ಗಾವಣೆ

ಆಡಳಿತ ಯಂತ್ರಕ್ಕೆ ಮೇಜರ್​ ಸರ್ಜರಿ: 11 ಐಎಎಸ್​ ಅಧಿಕಾರಿಗಳ ವರ್ಗಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada