ನವದಹೆಲಿ : ಹರಿಯಾಣ ರಾಜ್ಯದಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಎಂದು ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಇದೀಗ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಮೂರು ಹಂತದ ಮತದಾನ ಇಂದು ಮುಕ್ತಾಯವಾಗಿದೆ. ಚುಣಾವಣೋತ್ತರ ಸಮೀಕ್ಷೆಗಳಂತೆ ಇಲ್ಲಿಯೂ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ & ಎನ್ಸಿ ಸೇರಿ ಒಟ್ಟು 46-50 ಸೀಟ್ ಗೆಲ್ಲುವ ಸಾಧ್ಯತೆ ಇದೆ ಎಂದು ಫಲಿತಾಂಶ ಹೇಳಿದೆ. ಅದೇ ರೀತಿ ಬಿಜೆಪಿ 23-27, ಪಿಡಿಪಿ 7-11 ಹಾಗೂ ಇತರೆ 4-6 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ ಎಂದು ಸಮೀಕ್ಷೆಗಳು ಹೇಳಿವೆ.
ಇನ್ನು ಗುಲಿಸ್ತಾನ್ ನ್ಯೂಸ್ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 31-36, ಪಿಡಿಪಿ 5-7, ಬಿಜೆಪಿ 28-30 ಹಾಗೂ ಇತರ 19-23 ಸ್ಥಾನಗಳಲ್ಲಿ ಗೆಲ್ಲುವ ಸಂಭವವಿದೆ ಎಂದು ವಿವರಿಸಿದೆ. ಅ.8ರಂದು ಫಲಿತಾಂಶ ಹೊರಬೀಳಲಿದೆ.