• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 16, 2025
in ಕರ್ನಾಟಕ, ರಾಜಕೀಯ
0
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

1700 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಯೋಜನೆ

ಡಿಸಿಎಂ ಅವರಿಂದ ಬೆಂಗಳೂರು ಪ್ರದಕ್ಷಿಣೆ, ಕಾಮಗಾರಿ ವೇಗ, ಗುಣಮಟ್ಟ ಪರಿಶೀಲನೆ

“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಈ ಯೋಜನೆಯಲ್ಲಿ 14 ಪ್ಯಾಕೇಜ್ ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂ ಎಸ್ ಎಸ್ ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್ ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ” ಎಂದು ತಿಳಿಸಿದರು.

“ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು.

“ಇದರ ಜತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ” ಎಂದರು.

ನೀವೇ ಗುಣಮಟ್ಟ ಪರಿಶೀಲನೆ ಮಾಡಿದ್ದೀರಿ ಎಂದು ಕೇಳಿದಾಗ, “ಈ ಯೋಜನೆಗೆ ಮೀಸಲಿಟ್ಟಿರುವ ₹1700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂ ಎಸ್ ಎಸ್ ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ” ಎಂದು ತಿಳಿಸಿದರು.

ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ” ಎಂದು ತಿಳಿಸಿದರು.

ಬೇಸಿಗೆ ಆರಂಭವಾಗುತ್ತಿದ್ದು, ನೀರಿನ ಅಭಾವ ಎದುರಾಗದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದಾಗ, “ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು” ಎಂದು ಪ್ರತಿಕ್ರಿಯಿಸಿದರು.

Tags: aishwarya shivakumarD K ShivakumarDCM DK Shivakumardcm dk shivakumar sondeputy cm dk shivakumarDK Shivakumardk shivakumar and hr ranganathdk shivakumar and hr ranganath interviewdk shivakumar familydk shivakumar kpcc presidentdk shivakumar latest newsdk shivakumar newsdk shivakumar on horamavu buildingdk shivakumar reactiondk shivakumar speechdk shivakumar today newsdk shivakumar today news updatesDKShivakumarusha shivakumar
Previous Post

ಡಾಲಿ ಧನು – ಧನ್ಯ ಮದುವೆ ಕಾರ್ಯಕ್ರಮ, ಭೋಜನಾ ವ್ಯವಸ್ಥೆ ಹೇಗಿತ್ತು..?

Next Post

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗಾಗಿ ಭಾರತೀಯ ತಂಡದ ಸಿದ್ಧತೆ ಶುರು!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗಾಗಿ ಭಾರತೀಯ ತಂಡದ ಸಿದ್ಧತೆ ಶುರು!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗಾಗಿ ಭಾರತೀಯ ತಂಡದ ಸಿದ್ಧತೆ ಶುರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada