ಬೆಂಗಳೂರು: ಮೇ 15 : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ಕಾಂಗ್ರೆಸ್ ನಲ್ಲಿ ಈಗ ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ( dk shivakumar) ಅವರ ಜೊತೆ ಮುಖ್ಯಮಂತ್ರಿ ಸ್ಥಾನವನ್ನು (NEXT CM) ಹಂಚಿಕೊಳ್ಳಲು ಸಿದ್ಧರಿದ್ದಾರೆ ಎಂಬ ಸಲಹೆಯನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ ಎಂದು ಎಐಸಿಸಿ (AICC) ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆದರೆ, ಸಿದ್ದರಾಮಯ್ಯ (Siddaramaiah) ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಹುದ್ದೆಯನ್ನು ನನಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತು ಮೊದಲ ಎರಡು ವರ್ಷಗಳ ನಂತರ ಅಧಿಕಾರವನ್ನು ತ್ಯಜಿಸುತ್ತೇನೆ, ಉಳಿದ ಅವಧಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಕುರುಬ ಸಮುದಾಯದ ಪ್ರಬಲ ನಾಯಕರಾಗಿದ್ರೆ, ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ (CONGRESS) ಸಂಕಷ್ಟದಲ್ಲಿ ಸಿಲುಕಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, (MallikarjunKharge) ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಶಿವಕುಮಾರ್ ಇದಕ್ಕೆ ಒಪ್ಪುತ್ತಾರೂ ಇಲ್ಲವೂ ಗೊತ್ತಿಲ್ಲ. ಒಂದು ವೇಳೆ ಡಿಕೆಶಿ ಒಪ್ಪಿದ್ರೆ, ಗೃಹ ಖಾತೆ ಹೊಂದಿರುವ ಏಕೈಕ ಉಪಮುಖ್ಯಮಂತ್ರಿಯಾಗಬೇಕು ಎಂದು ಪಕ್ಷದ ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಪ್ರಕಾರ, ಒಟ್ಟು ಕಾಂಗ್ರೆಸ್ ಶಾಸಕರಲ್ಲಿ ಸರಿ ಸುಮಾರು 70 ( MLA) ರಷ್ಟು ಮಂದಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಎಂದು ಬಯಸಿದ್ದಾರಂತೆ. ಇನ್ನು ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷರು ಸೋನಿಯಾ ( soniyaGandhi) , ರಾಹುಲ್ ಮತ್ತು (priyankaGandhi) ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) (K.C.Venugopal) ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ.