• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

Any Mind by Any Mind
August 25, 2021
in ದೇಶ
0
70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್
Share on WhatsAppShare on FacebookShare on Telegram

ADVERTISEMENT

ನವದೆಹಲಿ: ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ‌ ಹೊಲೆಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಹಾಗಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರನ್ನು ಮೆಚ್ಚಿಸಲು ಆ ಮೂಲಕ ಪದವಿ ಗಳಿಸಲು ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ಬಿ.ವಿ. ಅವರು ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎನ್ನುವ ಬಗ್ಗೆ ನಾವು ಸರ್ಟಿಫಿಕೇಟ್ ಕೊಡಬೇಕಾದ ಅಗತ್ಯ ಇಲ್ಲ. ಬಿಜೆಪಿ ನಾಯಕರೇ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎಂದು ಹೇಳುತ್ತಾರೆ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬುದ್ಧಿ ಭ್ರಮಣೆ ಆಗಿರುವ ಬಿಜೆಪಿ ನಾಯಕರಿಗೆ ಕೌನ್ಸಿಲಿಂಗ್ ಮಾಡಿಸಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಇನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಚಿಕ್ಕಮಗಳೂರು ಮಹಿಳಾ ಮೋರ್ಚಾ ಉಪಾಧ್ಯಕ್ಷರನ್ನಾಗಿ ಸಿ.ಟಿ. ರವಿ ಅವರ ಮಡದಿ ಪಲ್ಲವಿ ಸಿ.ಟಿ. ರವಿ ಅವರನ್ನು ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿಯಲ್ಲಿ ಸಮರ್ಥ ಮಹಿಳಾ ಕಾರ್ಯಕರ್ತರು ಇರಲಿಲ್ಲವೇ? ಸಿ.ಟಿ. ರವಿ ಪತ್ನಿ ನೇಮಕ ಕುಟುಂಬ ರಾಜಕಾರಣ ಅಲ್ಲವೇ? ಎಂದು ಪ್ರಶ್ನಿಸಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ ??

ಸಿ.ಟಿ. ರವಿ ಕಾಂಗ್ರೆಸ್ ಪಕ್ಷ ದೇಶದಲ್ಲಿ 70 ವರ್ಷದಿಂದ ಏನೂ ಮಾಡಿಲ್ಲ ಎಂದು ಹೇಳುತ್ತಾರೆ. ಇದೇ ವೇಳೆ 217 ಯೋಜನೆಗಳಿಗೆ ಕಾಂಗ್ರೆಸ್ ನಾಯಕರ ಹೆಸರನ್ನು ಇಡಲಾಗಿದೆ ಎಂದು ಕೂಡ ಹೇಳುತ್ತಾರೆ. ಕಾಂಗ್ರೆಸ್ ಯೋಜನೆಗಳನ್ನು ನೆನಪಿಸಿಕೊಂಡ ಸಿಟಿ ರವಿ ಅವರಿಗೆ ಧನ್ಯವಾದಗಳು.‌ ಆದರೆ ಸಿ.ಟಿ. ರವಿ ಅವರು ಸೇರಿದಂತೆ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಂದಿರಾ ಗಾಂಧಿ ಅವರು ‘ಉಳುವವನೇ ಒಡೆಯ’ ಎಂಬ ಯೋಜನೆ ತಂದರು. ಉಳುವವನೇ ಒಡೆಯ ಯೋಜನೆಯ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಇದು ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆ ಎಂದು ಹೇಳಿದರು.

ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆ ಆಗಿದ್ದಾರೆ. ಆದರೆ ಅವರು ಎಂದಾದರೂ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರಾ? ಅಥವಾ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಜಿಎಸ್ ಟಿ ದುಡ್ಡು ಬಂದಿಲ್ಲದಿರುವ ಬಗ್ಗೆ ಧ್ವನಿ ಎತ್ತಿದ್ದಾರಾ? ಕೇಂದ್ರ ಸರ್ಕಾರದ ಕಳಪೆ ನಿರ್ವಹಣೆಯಿಂದ ಕೊರೋನಾ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಿದ್ದಾರಾ? ಅಲ್ಲದೆ ದೇಶಾದ್ಯಂತ ಈಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿದೆ. ಅಡುಗೆ ಅನಿಲದ ಬೆಲೆ ಏರಿಕೆ ಆಗಿದೆ. ಬಿಜೆಪಿ ಎಂದರೆ ಬೆಲೆ ಏರಿಕೆ ಎನ್ನುವಂತಾಗಿದೆ. ಬಿಜೆಪಿ ನಾಯಕರು ಈ ವಿಷಯಗಳ ಬಗ್ಗೆ‌ಚರ್ಚೆ ಮಾಡಲಿ ಎಂದು ಶ್ರೀನಿವಾಸ್ ಬಿ.ವಿ ತಾಖೀತು ಮಾಡಿದರು.

Tags: BJPCongress Partyಕರೋನಾನರೇಂದ್ರ ಮೋದಿಬಸವನಗೌಡ ಪಾಟೀಲ್ ಯತ್ನಾಳ್ಬಿಜೆಪಿಬಿವಿ ಶ್ರೀನಿವಾಸ್ಸಿ.ಟಿ. ರವಿಸಿದ್ದರಾಮಯ್ಯ
Previous Post

ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

Next Post

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!