ಚುನಾವಣಾ ಚಾಣಕ್ಯ ಅಂತಾನೇ ಕರೆಸಿಕೊಳ್ಳುವ ಅಮಿತ್ ಶಾ(Amith Shah) ಎರಡು ದಿನಗಳ ಮೈಸೂರು(Mysore) ಪ್ರವಾಸ ಕೈಗೊಂಡಿದ್ದಾರೆ. ಸುತ್ತೂರು ಕ್ಷೇತ್ರದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಿನ್ನೆ ರಾತ್ರಿ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ದೆಹಲಿಯಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ನೇರವಾಗಿ ಬಂದಿಳಿದ ಅಮಿತ್ ಶಾ, ಇಂದು ಸಾಕಷ್ಟು ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದಾರೆ. ರಾಡಿಸನ್ ಬ್ಲೂ (Radisson blu) ಹೊಟೇಲ್‌ನಲ್ಲಿ ಕೇಂದ್ರ ಗೃಹ ಸಚಿವರು ಸೀಕ್ರೆಟ್(Secret) ಮೀಟಿಂಗ್ ಕೂಡ ಮಾಡಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ರಾಡಿಸನ್ ಬ್ಲೂ (Radisson blu) ಹೋಟೆಲ್‌ನಲ್ಲಿ ಬಿಜೆಪಿ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಬೆಳಗ್ಗೆ 10.50ಕ್ಕೆ ಱಡಿಸನ್ ಬ್ಲೂ ಹೊಟೇಲ್‌ನಿಂದ ಚಾಮುಂಡಿ ಬೆಟ್ಟಕ್ಕೆ ತೆರಳಲಿರುವ ಅಮಿತ್ ಶಾ ಚಾಮುಂಡಿ ದೇವಿ ದರ್ಶನ ಪಡೆಯಲಿದ್ದಾರೆ. ಇನ್ನು 11.20ಕ್ಕೆ ದರ್ಶನ ಮುಗಿಸಿ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿದ್ದು, ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಸುತ್ತೂರು ಕ್ಷೇತ್ರಕ್ಕೆ ಮಧ್ಯಾಹ್ನ 12 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಮಧ್ಯಾಹ್ನ 12.10 ರಿಂದ 1.30ರ ವರೆಗೆ ಸುತ್ತೂರು ಜಾತ್ರಾ ಮಹೋತ್ಸದಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಕಾಂಗ್ರೆಸ್ ಶಾಸಕರೂ ಆಗಿರುವ ಲಿಂಗಾಯತ ಸಮುದಾಯದ ಶಾಮನೂರು ಶಿವಶಂಕರಪ್ಪ ನಿರ್ಮಾಣದ ತೀರ್ಥಯಾತ್ರ ಗೆಸ್ಟ್ ಹೌಸ್ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.10ಕ್ಕೆ ಸುತ್ತೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ವಾಪಸ್ ಆಗಲಿರುವ ಅಮಿತ್ ಶಾ, ಮಧ್ಯಾಹ್ನ 2.30ಕ್ಕೆ ಏರ್‌ಪೋರ್ಟ್‌ನಿಂದ ಮತ್ತೆ ಱಡಿಸನ್ ಬ್ಲೂ ಹೊಟೇಲ್‌ಗೆ ವಾಪಸ್ ಆಗಲಿರುವ ಅಮಿತ್ ಶಾ, 2 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಸಂಜೆ 4.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಗುಜರಾತ್‌ನ ಅಹಮದಾಬಾದ್ ಕಡೆಗೆ ಪ್ರಯಾಣ ಮಾಡಲಿದ್ದಾರೆ.

ಮೈಸೂರಿನಲ್ಲಿ ಮೈಸೂರಿನಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರದ ಮುಖಂಡರ ಜೊತೆ ಅಮಿತ್ ಶಾ ಮೀಟಿಂಗ್ ಮಾಡಲಿದ್ದಾರೆ. ಜೆಡಿಎಸ್ ಬಿಜೆಪಿ ಮೈತ್ರಿ ಬಳಿಕ ಹಳೇ ಮೈಸೂರಿನಿಂದಲೇ ಅಮಿತ್ ಶಾ ರಣಕಹಳೆ ಮೊಳಗಿಸಲಿದ್ದಾರೆ. ಪ್ರತಿ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಅಮಿತ್ ಶಾ ಒನ್ ಟು ಒನ್ ಮೀಟಿಂಗ್ ಮಾಡಲಿದ್ದು, ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಲಿದ್ದಾರೆ ಎನ್ನಲಾಗಿದೆ. ಮೈಸೂರಿನಲ್ಲಿ ಸಭೆ ನಡೆಸಿ ಹಳೇ ಮೈಸೂ ಭಾಗದಲ್ಲಿ ಪಕ್ಷ ಕಟ್ಟುವ ಕೆಲಸಕ್ಕೆ ಕೈ ಹಾಕಿದ್ದಾರೆ.
#AmithShah #BJPIndia #BJPKarnataka #CentrelMinister