ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲದೇ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಘರ್ ವಾಪಸಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಯಾರೇ ಆಗಲಿ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು.ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ಇದುವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಬಿಜೆಪಿ ನಾಯಕರನ್ನು ಭೇಟಿ ಮಾಡದ ವಿಚಾರದಲ್ಲಿ ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಈ ರೀತಿ ಆಗಿರಲಿಲ್ಲ. ಮೋದೀನೆ ಇವರನ್ನು ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಮೋಡ ಬಿತ್ತನೆ ವಿಚಾರವನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ. ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನವಿಲ್ಲ. ಬರ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬರಪೀಡಿತ ಪ್ರದೇಶ ಘೋಷಣೆಯಾದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.