ಬೆಂಗಳೂರು: ಶಿಗ್ಗಾಂವಿ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಸಿಕ್ಕರೂ ಅದು ನನ್ನದು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ನಂತರ ಬಸವರಾಜ ಬೊಮ್ಮಾಯಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ. ಹೀಗಾಗಿ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಗಾಗಿ ಫೈಪೋಟಿ ನಡೆಯುತ್ತಿದೆ. ಈ ಮಧ್ಯೆ ಅವರ ಮಗನ ಹೆಸರು ಕೇಳಿ ಬರುತ್ತಿದೆಯಾದರೂ ಯಾರೇ ಬಂದರೂ ಕ್ಷೇತ್ರ ನನ್ನದು ಎಂದು ಹೇಳಿದ್ದಾರೆ.
ಪಕ್ಷ ಯಾರನ್ನೇ ನಿಲ್ಲಿಸಿದರೂ ನಮ್ಮ ಬೆಂಬಲ ಇದೆ. ನನ್ನ ಮಗನ ಹೆಸರು ಕೇಳಿ ಬರುವುದು ಸಹಜ. ಆದರೆ, ಆ ರೀತಿಯ ಪ್ರಸ್ತಾವನೆ ಇಲ್ಲ. ಇದರಲ್ಲಿ ವಿವಾದ ಸೃಷ್ಟಿಸುವುದು ಸರಿಯಲ್ಲ. ಉದಾಸಿಗೇ ಕೊಡಲಿ, ಯಾರಿಗೇ ಕೊಡಲಿ ಅದು ಪಕ್ಷಕ್ಕೆ ಬಿಟ್ಟಿದ್ದು. ಯಾರಿಗೇ ಟಿಕೆಟ್ ಕೊಟ್ಟರೂ ನನಗೂ ಶಿಗ್ಗಾಂವಿ ಕ್ಷೇತ್ರಕ್ಕೂ ಇರುವ ಅವಿನಾಭವ ಬಾಂಧವ್ಯಕ್ಕೆ ಧಕ್ಕೆ ಆಗುವುದಿಲ್ಲ. ಹಾಗಾಗಿ ಯಾರಿಗೆ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ. ನಾನು ಕ್ಷೇತ್ರದ ಜನತೆಯ ಮನೆ ಮಗ, ಅಣ್ಣ, ತಮ್ಮ, ಅವರ ಮನೆಯ ಸದಸ್ಯ ಎಂದು ಹೇಳಿದ್ದಾರೆ.