ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಚುನಾವಣಾ ರಣ ಕಣ ಸಜ್ಜಾಗಿದೆ. ಇಂದು ಅಮಿತ್ ಶಾ ಅರುಣಾಚಲ ಪ್ರದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಆಗಮಿಸಿದ ಬಳಿಕವೇ ಬಿಜೆಪಿ ಪಟ್ಟಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪರಿಗೆ ವರಿಷ್ಠರ ಸ್ಥಾನ ಮಾನ ನೀಡೋದಾಗಿ ಬಿಜೆಪಿ ಹೈಕಮಾಂಡ್ ಹೇಳಿತ್ತು. ಆದರೆ ಬಿಜೆಪಿ ಪಟ್ಟಿ ಬಿಡುಗಡೆಗೂ ಮುನ್ನವೇ ಅಂದರೆ ಸೋಮವಾರ ರಾತ್ರಿಯೇ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ಸಾಗಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಸೋಮವಾರದಂದು ದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸಭೆಗಳ ಮೇಲೆ ಸಭೆ ನಡೆಸಿದ್ದರು. ಈ ಎಲ್ಲಾ ಸಭೆಗಳಲ್ಲಿ ಯಡಿಯೂರಪ್ಪ ಭಾಗಿಯಾಗಿದ್ದರು. ಆದರೆ ಇಂದು ಕೂಡ ಬಿಜೆಪಿ ಟಿಕೆಟ್ ಹಂಚಿಕೆ ಕುಡಿತಂತೆ ಸಭೆ ನಡೆಯಬೇಕಿದ್ದು ಈ ಸಭೆಯಲ್ಲಿ ಭಾಗಿಯಾಗದೇ ಯಡಿಯೂರಪ್ಪ ಬೆಂಗಳೂರಿಗೆ ಮರಳಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ವಿಜಯೇಂದ್ರಗೆ ಟಿಕೆಟ್ ನೀಡುವ ವಿಚಾರದಲ್ಲಿ ಅಮಿತ್ ಶಾ ಸಿಎಂ ಬಸವರಾಜ ಬೊಮ್ಮಾಯಿ ಪ್ರತ್ಯೇಕ ಸಭೆ ನಡೆಸಿದ್ದು ಯಡಿಯೂರಪ್ಪ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.






