
ರಾಜ್ಯ ಬಜೆಟ್ ಅಧಿವೇಶನದ ನಡುವೆ ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಡಿಸಿಎಂ ಡಿ.ಕೆ ಶಿವಕುಮಾರ್. ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ಏರ್‌ಪೋರ್ಟ್ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಲಿರುವ ಡಿ.ಕೆ ಶಿವಕುಮಾರ್, ಬೆಳಗ್ಗೆ 11ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನಿರಾವರಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಮಾತುಕತೆ ಮಾಡಲಿದ್ದು, ಜಲಶಕ್ತಿ ಸಚಿವರ ಭೇಟಿ ಬಳಿಕ ಇನ್ನೂ ಕೆಲವು ಕೇಂದ್ರ ಸಚಿವರನ್ನ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಜಲಸಂಪನ್ಮೂಲ ಇಲಾಖೆ ಕೆಲಸದ ಮೇಲೆ ದೆಹಲಿಗೆ ತೆರಳುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಅ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಇವತ್ತು ದೆಹಲಿಯಲ್ಲೇ ವಾಸ್ತವ್ಯ ಹೂಡಲಿರೋ ಡಿಸಿಎಂ ಡಿ.ಕೆ ಶಿವಕುಮಾರ್ ಸಾಕಷ್ಟು ಚರ್ಚೆ ನಡೆಸುವ ಸಲುವಾಗಿ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು. ಆದರೆ ಸಿಎಂ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಹೈಕಮಾಂಡ್ ನಾಯಕರು ಎದುರು ಕೊಟ್ಟ ಮಾತಿನಂತೆ ನಡೆದುಕೊಳ್ತಿಲ್ಲ ಎಂದು ದೂರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇನ್ನೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಬಳಿ ಒಳಮೀಸಲಾತಿ ವಿಚಾರವನ್ನು ಸೃಷ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತೆ ಕೆಲವು ನಾಯಕರು ಮಾಡುತ್ತಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ತನ್ನ ಬೆಂಬಲಿಗರನ್ನು ಮುಂದೆ ಬಿಟ್ಟು ತಮಾಷೆ ನೋಡುವ ಕೆಲಸ ಮಾಡಲಾಗ್ತಿದೆ ಎಂದು ಡಾ ಜಿ ಪರಮೇಶ್ವರ್ ವಿರುದ್ಧ ದೂರು ಕೊಡುವ ಸಾಧ್ಯತೆಯೂ ಇದೆ ಎಂದು ದೆಹಲಿ ಮೂಲಗಳು ಪ್ರಸ್ತಾಪಿಸುತ್ತಿವೆ. ಇನ್ನು ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲೂ ಇಬ್ಬರು ಸಚಿವರು ಭಾಗಿಯಾಗಿರುವ ಬಗ್ಗೆ ಸಾಕಷ್ಟು ದೊಡ್ಡ ಸುದ್ದಿ ಆಗ್ತಿದೆ. ಆ ವಿಚಾರವಾಗಿ ಯಾವ ಮಿನಿಸ್ಟರ್ಸ್ ಅನ್ನೋ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟು ರಾಜೀನಾಮೆ ಪಡೆದು ಸರ್ಕಾರದ ಗೌರವ ಉಳಿಸಿಕೊಳ್ಳಲು ಅನುಮತಿ ಪಡೆದು ಬರ್ತಾರೆ ಅನ್ನೋ ಮಾಹಿತಿಯೂ ಹರಿದಾಡ್ತಿದೆ.