ಕಾಂಗ್ರೆಸ್ (Congress) ಸಾಧನಾ ಸಮಾವೇಶದ ಬಗ್ಗೆ ಬಿಜೆಪಿ (Bjp) ನಾಯಕರ ಟೀಕೆಗಳಿಗೆ ಸಿಎಂ ಸಿದ್ದರಾಮಯ್ಯ (Cm Siddaramaiah) ಪ್ರತಿಕ್ರಿಯಿಸಿದ್ದು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಸರ್ಕಾರದ ಸಾಧನೆ ಜನರಿಗೆ ತಿಳಿಸಲು ಈ ಸಮಾವೇಶ ಮಾಡುತ್ತಿದ್ದೇವೆ.ಏನೆಲ್ಲಾ ಅನುದಾನ ಕೊಟ್ಟಿದ್ದೇವೆ ಅಂತ ಜನರಿಗೆ ತಿಳಿಸಬೇಕು.ಸಾವಿರಾರು ಕೋಟಿ ಹಣವನ್ನ ಅಭಿವೃದ್ಧಿಗೆ ಕೊಟ್ಟಿದ್ದೇವೆ ಅದೆಲ್ಲ ಜನರಿಗೆ ಗೊತ್ತಾಗಬೇಕು.ಹಾಗಾಗಿ ನಾಳೆ ಸಾಧನಾ ಸಮಾವೇಶ ಮಾಡ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನು ಬಿಜೆಪಿಯವರು ಮೊದಲು ದಲಿತರನ್ನ (Dalit) ಪ್ರಧಾನ ಮಂತ್ರಿ (Pm)ಮಾಡಲಿ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ದಲಿತರನ್ನು ಆಯ್ಕೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ,ಕಾಂಗ್ರೆಸ್ ಪಕ್ಷ ದಲಿತರಿಗೆ ಎಲ್ಲವನ್ನೂ ನೀಡಿದೆ ಎಂದಿದ್ದಾರೆ.

ಈ ದೇಶದಲ್ಲಿ ಸಂವಿಧಾನಾತ್ಮಕವಾಗಿ ಇರುವ ಪಕ್ಷ ಅಂದ್ರೆ ಅದು ಕಾಂಗ್ರೆಸ್ ಮಾತ್ರ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೊದಲು ತಮ್ಮ ಸ್ಥಾನದಿಂದ ಕೆಳಗಿಳಿದು ದಲಿತರನ್ನು ತಮ್ಮ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಿ ಎಂದು ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.