ಬೆಂಗಳೂರು (Bengaluru) ರಸ್ತೆಗಳಲ್ಲಿ ಗುಂಡಿಗಳದ್ದೇ (Potholes) ದರ್ಬಾರ ಹೆಚ್ಚಾಗಿದೆ. ಎಷ್ಟೇ ಬಾರಿ ಜನರು ಮನವಿಗಳನ್ನು ಸಲ್ಲಿಸಿದ್ರೂ, ಆಕ್ರೋಶ ವ್ಯಕ್ತಪಡಿಸಿದ್ರು, ಅಥವಾ ಸರ್ಕಾರ ಡೆಡ್ ಲೈನ್ ಫಿಕ್ಸ್ ಮಾಡಿದ್ರೂ ಸಹ ರಸ್ತೆಗಳು ಮಾತ್ರ ಗುಂಡಿ ಮುಕ್ತವಾಗುತ್ತಿಲ್ಲ. ಹೀಗಾಗಿ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Cm Siddaramaiah) ಗರಂ ಆಗಿದ್ದಾರೆ.

ರಸ್ತೆಗಳೆಲ್ಲ ಗುಂಡಿ ಬಿದ್ದು ಹಾಳಾಗಿದೆ. ಆದ್ರೆ ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತಿಲ್ವಾ? ನಿಮ್ಮಿಂದ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗದರಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಜನ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ದೂಷಿಸುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಇದೇ ವೇಳೆ ಎಂಜಿನಿಯರ್‌ಗಳನ್ನ ಕೂಡ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದಾರೆಂದು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.





