• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರರಕರಣದಲ್ಲಿ ಸರ್ಕಾರದ ಮೌನ ಏಕೆ?: ಕಾಂಗ್ರೆಸ್

Any Mind by Any Mind
October 1, 2021
in ಕರ್ನಾಟಕ, ದೇಶ, ರಾಜಕೀಯ
0
ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರರಕರಣದಲ್ಲಿ ಸರ್ಕಾರದ ಮೌನ ಏಕೆ?: ಕಾಂಗ್ರೆಸ್
Share on WhatsAppShare on FacebookShare on Telegram
ADVERTISEMENT

‘ಅದಾನಿ ಮುಂದ್ರಾ ಅವರ ಬಂದರಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ? ಇದು ದೇಶದ ಭದ್ರತೆಗೆ ಅಪಾಯ ತರುವ ವಿಚಾರವಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ವಕ್ತಾರರಾದ ಸುಪ್ರಿಯಾ ಶ್ರೀನೇಟ್ ಅವರು, ‘ಅದಾನಿ ಮುಂದ್ರಾ ಬಂದರಿನಲ್ಲಿ ಈ ರೀತಿ ಡ್ರಗ್ಸ್ ಪತ್ತೆ ಪ್ರಕರಣ ಇದೇ ಮೊದಲ ಬಾರಿಯಲ್ಲ. ಈ ಹಿಂದೆಯೂ ಡ್ರಗ್ಸ್ ಪತ್ತೆಯಾಗಿದ್ದು, ಆದರೂ ಬಂದರು ನಡೆಸುತ್ತಿರುವ ಅದಾನಿ ಸಮೂಹದ ವಿಚಾರಣೆ ನಡೆಸಿಲ್ಲ ಯಾಕೆ?’ ಎಂದು ಪ್ರಶ್ನಿಸಿದ್ದಾರೆ.

‘ಕೆಲ ದಿನಗಳ ಹಿಂದೆ ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ 3000 ಕೆ.ಜಿ ಅಂದರೆ 21 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಕಳೆದ ಜೂನ್ ತಿಂಗಳಲ್ಲಿ 25,000 ಕೆ.ಜಿಯಷ್ಟು ಡ್ರಗ್ಸ್ ಬಂದಿದ್ದು, ಅದು ಈಗಾಗಲೇ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ. ಇದನ್ನು ಸೆಮಿ ಕಟ್ ಟಾಲ್ಕಮ್ ಪೌಡರ್ ಎಂದು ಹೆಸರಿಸಲಾಗಿದ್ದು, ಈ ಡ್ರಗ್ಸ್ಗಳನ್ನು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಆಶಿ ಟ್ರೇಡಿಂಗ್ ಕಂಪನಿ ಆಮದು ಮಾಡಿಕೊಂಡಿದೆ. ಇದು ದೇಶದ ಯುವಕರ ಭವಿಷ್ಯದ ವಿಷಯವಾಗಿದೆ. ಆದರೂ ಈ ವಿಚಾರವಾಗಿ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ದೇಶದ ಪ್ರಮುಖ ಮಾಧ್ಯಮಗಳಾಗಲಿ ಮಾತನಾಡುತ್ತಿಲ್ಲ’ ಎಂದು ತಿಳಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿ ಟ್ರೇಡಿಂಗ್ ಕಂಪನಿ ಮಾಲೀಕರಾದ ಸುಧಾಕರ್ ಮಚ್ವರಮ್ ಹಾಗೂ ಅವರ ಪತ್ನಿ ಗವಿಂದ ರಾಜು ವೈಶಾಲಿ ಅವರನ್ನು ಬಂಧಿಸಲಾಗಿದ್ದು, ಇಂತಹ ಸಣ್ಣ ಟ್ರೇಡಿಂಗ್ ಕಂಪನಿ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಶಂಕೆ ಇದ್ದು, ಅದು ಯಾರು ಎಂಬುದರ ಬಗ್ಗೆ ತನಿಖೆ ನಡೆದಿಲ್ಲ. ಜೂನ್ ತಿಂಗಳಲ್ಲಿ ಅಫ್ಘಾನಿಸ್ತಾನದ ಹಸನ್ ಹುಸೇನ್ ಲಿಮಿಟೆಡ್ ಕಂಪನಿ 25 ಸಾವಿರ ಕೆ.ಜಿ ಅಂದರೆ 1.75 ಲಕ್ಷ ಕೋಟಿಯಷ್ಟು ಮೊತ್ತದ ಹೆರಾಯಿನ್ ರಫ್ತು ಮಾಡಿದ್ದು, ಅದು ದೇಶದ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿದೆ. ಇದು ದೇಶದ ಲಕ್ಷಾಂತರ ಯುವಕರು ಮಾದಕ ವ್ಯಸನಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ ಇದು ದೇಶದ ಭದ್ರತೆಗೆ ಮಾರಕವಾಗಲಿದೆ’ ಎಂದು ಅಭಿಪ್ರಾಯಪಟಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯುವಕರಿಗೆ ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡಬೇಕಾಗಿತ್ತು, ಆದರೆ ದೇಶದ ಯುವಕರು ಈ ಡ್ರಗ್ಸ್ ಜಾಲಕ್ಕೆ ಸಿಲುಕುವಂತೆ ಮಾಡಲಾಗಿದೆ. ಕಳೆದ ವರ್ಷ ಕೇವಲ 2 ಗ್ರಾಂ ಡ್ರಗ್ಸ್ ಸಿಕ್ಕ ಪ್ರಕರಣದಲ್ಲಿ ಇಡೀ ಹಿಂದಿ ಚಿತ್ರರಂಗವನ್ನೇ ಜಾಲಾಡಿದ್ದ ಮಾಧ್ಯಮಗಳು, ಈ ವರ್ಷ ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಪತ್ತೆಯಾಗಿದ್ದರೂ ಯಾವುದೇ ಚರ್ಚೆ ನಡೆಸುತ್ತಿಲ್ಲ. ಡ್ರಗ್ಸ್ ನಿಯಂತ್ರಣ ಮಾಡಲು ನೇಮಕಗೊಂಡಿರುವ ಮಾದಕ ವಸ್ತುಗಳ ನಿಯಂತ್ರಣ ಮಂಡಳಿಯಲ್ಲಿ ಕಳೆದ 18 ತಿಂಗಳಿನಿಂದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿಲ್ಲ. ದೇಶಕ್ಕೆ ಡ್ರಗ್ಸ್ ಪ್ರವೇಶಿಸಲು ಗುಜರಾತಿನ ಬಂದರು ರಹದಾರಿಯಾಗಿದ್ದು, ಮೋದಿ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿದೆ’ ಎಂದು ತಿಳಿಸಿದ್ದಾರೆ.

ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸುಪ್ರಿಯಾ ಅವರು 10 ಪ್ರಶ್ನೆಗಳನ್ನು ಕೇಳಿದ್ದಾರೆ

1)     ದೇಶದಲ್ಲಿ ಡ್ರಗ್ಸ್ ಜಾಲ ನಿರಾತಂಕವಾಗಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, 3 ಸಾವಿರ ಕೆ.ಜಿ ಹೆರಾಯಿನ್ ಪತ್ತೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದು ದೇಶದ ಯುವಕರ ಭವಿಷ್ಯಕ್ಕೆ ಮಾರಕವಲ್ಲವೇ?

2)     ಕಳೆದ ಜೂನ್ ನಲ್ಲಿ ಆಮದುಗೊಂಡ 1.75ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆ.ಜಿ ಹೆರಾಯಿನ್ ನಾಪತ್ತೆಯಾಗಿದ್ದು, ಇದರ ಬಗ್ಗೆ ಈವರೆಗೂ ತನಿಖೆ ನಡೆಸಿಲ್ಲ ಯಾಕೆ?

3)     ಭಾರತದ ಮಾದಕದ್ರವ್ಯ ನಿಯಂತ್ರಣ ಮಂಡಳಿ, ಸಿಬಿಐ, ಇಡಿ, ಡಿಆರ್ ಐ ಸಂಸ್ಥೆಗಳು ಏನು ಮಾಡುತ್ತಿವೆ? ಇವು ಕೇವಲ ರಾಜಕೀಯ ಎದುರಾಳಿಗಳ ವಿರುದ್ಧ ಬಳಸುವ ಅಸ್ತ್ರವಾಗಿದೆಯಾ? 

4)     ತಾಲಿಬಾನ್ ನಿಯಂತ್ರಣದಲ್ಲಿರುವ ಆಫ್ಘಾನಿಸ್ತಾನದಿಂದ ದೇಶಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ರವಾನೆಯಾಗುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಲ್ಲವೇ?

5)     ಪ್ರಭಾವಿ ವ್ಯಕ್ತಿ ಹೊರತಾಗಿ ಇತರರು ಇಷ್ಟು ದೊಡ್ಡ ಮಟ್ಟದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವೇ? ಈ ಬಗ್ಗೆ ಪ್ರಧಾನಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲಿ ಅನುಮಾನಾಸ್ಪದ ಮೌನಕ್ಕೆ ಶರಣಾಗಿರುವುದೇಕೆ?

6)     ಈ ಪ್ರಕರಣದಲ್ಲಿ ಅದಾನಿ ಮುಂದ್ರಾ ಬಂದರಿನ ವಿಚಾರಣೆ ನಡೆದಿಲ್ಲ ಯಾಕೆ? ಗುಜರಾತಿನಲ್ಲಿರುವ ಈ ಕಂಪನಿ ದೇಶಕ್ಕೆ ಡ್ರಗ್ಸ್ ಸರಬರಾಜು ಮಾಡುವ ರಹದಾರಿಯಾಗಿ ಮಾರ್ಪಟ್ಟಿದೆ?

7)     ವಿಶೇಷ ನ್ಯಾಯಾಲಯದ ಅಭಿಪ್ರಾಯದಂತೆ ಮುಂದ್ರಾ ಬಂದರು ನಡೆಸುತ್ತಿರುವ ಅದಾನಿ ಗ್ರೂಪ್ ಈ ಆಮದಿನಿಂದ ಲಾಭ ಪಡೆಯುತ್ತಿಲ್ಲವೇ?

8)     ಕಳೆದ 18 ತಿಂಗಳಿನಿಂದ ದೇಶದ ಮಾದಕ ದ್ರವ್ಯ ನಿಯಂತ್ರಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿ ಇರುವುದೇಕೆ?

9)     ರಾಷ್ಟ್ರೀಯ ಭದ್ರತೆ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಪದೇ ಪದೆ ವಿಫಲರಾಗುತ್ತಿರುವುದೇಕೆ?

10)   ದೇಶದ ಯುವಕರ ಭವಿಷ್ಯಕ್ಕೆ ಮಾರಕವವಾಗಿರುವ ಈ ಡ್ರಗ್ಸ್ ಪ್ರಕರಣದಲ್ಲಿ ಹಾಲಿ ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿಲ್ಲ ಯಾಕೆ?

ಸುದ್ದಿಘೋಷ್ಟಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಬಿ.ಎಲ್ ಶಂಕರ್, ಎಐಸಿಸಿ ವಕ್ತಾರರಾದ ಭವ್ಯ ನರಸಿಂಹಮೂರ್ತಿ, ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಸಹ ಸಂಚಾಲಕರಾದ ರಾಮಚಂದ್ರಪ್ಪ ಹಾಗೂ ಸಲೀಂ ಉಪಸ್ಥಿತರಿದ್ದರು.

Supriya Shrinate Media Conference, AICC National Spokesperson, KPCC Office
Tags: Adani GroupAmit ShahBJPCBICongress PartyCovid 19Drugs rowEnforcement DirectorateIncome Tax Departmentಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಿಯಲ್ ಎಸ್ಟೇಟ್ ನೆರಳಲ್ಲಿ ವಿಜಯನಗರ ಜಿಲ್ಲೆಯ ವೈಭವೋಪೇತ ಉದ್ಘಾಟನೆ: ಆನಂದಸಿಂಗ್ ಅಕ್ಕಪಕ್ಕದಲ್ಲಿ ಯಡಿಯೂರಪ್ಪ-ಬೊಮ್ಮಾಯಿ

Next Post

People giving successive government in two terms, we will back in power 2024: Brijesh Kalappa

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
People giving successive government in two terms, we will back in power 2024: Brijesh Kalappa

People giving successive government in two terms, we will back in power 2024: Brijesh Kalappa

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada