• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಾ.ನಗರ-ನಂಜನಗೂಡು ಚತುಷ್ಟಥ ರಸ್ತೆಗೆ ಯಾಕೆ ಸರ್ವೀಸ್ ರೋಡ್ ಬಿಟ್ಟಿಲ್ಲ: ಡಿಕೆಶಿಗೆ ಪ್ರತಾಪ್ ಸಿಂಹ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ರಾಜಕೀಯ
0
ಚಾ.ನಗರ-ನಂಜನಗೂಡು ಚತುಷ್ಟಥ ರಸ್ತೆಗೆ ಯಾಕೆ ಸರ್ವೀಸ್ ರೋಡ್ ಬಿಟ್ಟಿಲ್ಲ: ಡಿಕೆಶಿಗೆ ಪ್ರತಾಪ್ ಸಿಂಹ ತಿರುಗೇಟು
Share on WhatsAppShare on FacebookShare on Telegram

ಮೈಸೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ  ಚಾಮರಾಜನಗರ- ನಂಜನಗೂಡು ಚತುಷ್ಟಥ ರಸ್ತೆಗೆ ಯಾಕೆ ಸರ್ವಿಸ್ ರೋಡ್ ಬಿಟ್ಟಿಲ್ಲ.? ಅಂದು ಬಡವರು ಡಿಕೆಶಿ ಕಣ್ಣಿಗೆ ಕಾಣಲಿಲ್ಲವಾ.? ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ADVERTISEMENT

ಹೈವೇಗೆ ಸರ್ವಿಸ್ ರೋಡ್ ನಿರ್ಮಾಣ ಮಾಡಲಿ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ  ಮೊದಲು ನೆನೆಗುದಿಗೆ ಬಿದ್ದಿರುವ ಮಳವಳ್ಳಿ ಬೆಂಗಳೂರು ಮಾರ್ಗ ಸರಿಪಡಿಸಲಿ. ಹಾಸನ ಬೆಂಗಳೂರು ರಸ್ತೆ ನಿರ್ಮಾಣ ಮಾಡಿದಾಗಲು ಸರ್ವಿಸ್ ರೋಡ್ ಮಾಡಿರಲಿಲ್ಲ. ಅಂದು ಯಾಕೆ ಡಿಕೆಶಿಗೆ ಬಡವರ ಪರ ಕಾಳಜಿ ಇರಲಿಲ್ಲ ಎಂದು ಪ್ರಶ್ನಿಸಿದರು.

ಡಿಕೆಶಿ ಹೇಳಿಕೆ ಸಕಾರಾತ್ಮಕವಾಗಿ ಪರಿಗಣನೆ

ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಸಾಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಸರ್ವಿಸ್ ರೋಡ್ ನಿರ್ಮಾಣದ ಬಳಿಕವೇ ಉದ್ಘಾಟನೆ ಆಗಲಿದೆ. ದ್ವಿಚಕ್ರವಹನ, ಸಣ್ಣಪುಟ್ಟ ವಾಹನಗಳಿಗೆ  ಸರ್ವಿಸ್ ರೋಡ್ ಇರಲಿದೆ ಎಂದು ಹೇಳಿದರು.

ಡಿ ಕೆ ಶಿವಕುಮಾರ್ ಗೆ ‌ನಾನು ಧನ್ಯವಾದ ಹೇಳುತ್ತೇನೆ. ಈಗಲಾದರೂ ಡಿ ಕೆ ಶಿವಕುಮಾರ್ ಬಡವರ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ಮಾಡುತ್ತಿದ್ದೇವೆ. ಈಗಾಗಲೇ ಸಬ್ ವೇ ಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ಯಾರಿಸ್ ಮೀರಿಸುವ ರಸ್ತೆ ನಿರ್ಮಾಣವಾಗಿದೆ

ಪ್ಯಾರಿಸ್ ಮಾದರಿಯಲ್ಲಿ  ಒಂದೇ ಒಂದು ರಸ್ತೆ ನಿರ್ಮಾಣ ಮಾಡಲಿ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಮಾತನಾಡಿ, ಕಾಂಗ್ರೆಸ್ ನವರು ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ. ಡಿಕೆಶಿಗೆ ಒಮ್ಮೆ ಹೈವೇನಲ್ಲಿ ಬಂದು ಹೋಗಿ ಎಂದು ಹೇಳಿ. ರಸ್ತೆಯಲ್ಲಿ ಬರುವಾಗ ನೋಡಲು ಹೇಳಿ. ಪ್ಯಾರಿಸ್ ಮಾದರಿ ರಸ್ತೆಯನ್ನು ಮೀರಿಸುವ ರಸ್ತೆ ನಿರ್ಮಾಣವಾಗಿದೆ ಎಂದು ಟಾಂಗ್ ನೀಡಿದರು.

ಮೈಸೂರಿಗೂ ಈ ಬಾರಿಯ ಬಜೆಟ್ ಹಲವು ಯೋಜನೆ ನೀಡಿದೆ. ಮೋದಿ ಸರ್ಕಾರ ಯಾವುದೇ ಯೋಜನೆಗೆ ಬಜೆಟ್ ಕಾಗಿ ಕಾದು ಕುಳಿತುಕೊಳ್ಳುವುದಿಲ್ಲ. ಬೇಕೆಂದಾಗ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದರು.

ಬೊಮ್ಮಾಯಿ ಸರ್ಕಾರ ಎಸ್ಸಿ ಎಸ್ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡುವ  ಕೆಲಸ ಮಾಡಿದೆ. ಈ ಮೂಲಕ ಆ ಸಮುದಾಯಕ್ಕೆ ಉಪಯೋಗವಾಗುತ್ತಿದೆ. ಹತ್ತು ಲಕ್ಷ ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡುತ್ತಿದ್ದಾರೆ ಎಂದು ತಿಳಿಸಿದರು.

Tags: D K Shivakumarmp prathap simhaMysore
Previous Post

ರೋಹಿಣಿ ಸಿಂಧೂರಿ ಹಾಗೂ ಡಿ ರೂಪ ಫೈಟ್‌ ಗೆ ಡಿ.ಕೆ. ರವಿ ತಾಯಿ ಕಣ್ಣೀರು..!

Next Post

ಡಿ ರೂಪ ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ: ಐಪಿಎಸ್ ಅಧಿಕಾರಿ ಡಿ.ರೂಪ ಪರ ಸಂಸದ ಪ್ರತಾಪ್ ಸಿಂಹ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
Next Post
ಡಿ ರೂಪ ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ: ಐಪಿಎಸ್ ಅಧಿಕಾರಿ ಡಿ.ರೂಪ ಪರ ಸಂಸದ ಪ್ರತಾಪ್ ಸಿಂಹ

ಡಿ ರೂಪ ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ: ಐಪಿಎಸ್ ಅಧಿಕಾರಿ ಡಿ.ರೂಪ ಪರ ಸಂಸದ ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!