ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ (Land encroachment) ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcc Dk Shivakumar) HDK ಕಾಲೆಳೆದಿದ್ದಾರೆ. ಒಂದುವೇಳೆ ಕೇಂದ್ರ ಸಚಿವ HD ಕುಮಾರಸ್ವಾಮಿ ಭೂಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಅವರು ಯಾಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ಜಮೀನು ಒತ್ತುವರಿ ತೆರವು ಮಾಡುವ ಬಗ್ಗೆ ಅಧಿಕಾರಿಗಳು ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ ಎಂದು ಹೇಳಿದ್ದಾರೆ.

ಹೀಗಾಗಿ ಒತ್ತುವರಿ ಕುರಿತು ಕ್ರಮ ತೆಗೆದುಕೊಳ್ಳಲು ನ್ಯಾಯಾಲಯ ಡೆಡ್ ಲೈನ್ ನೀಡಿದ ಹಿನ್ನಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಜಾಗ ಅಳತೆ ಮಾಡಿದ್ದಾರೆ ಎಂದ ಅವರು ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಎಂದು ಪರೋಕ್ಷವಾಗಿ ಹೆಚ್.ಡಿ.ಕೆ ಗೆ ತಿವಿದಿದ್ದಾರೆ.