ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಕೆ (Weather Report)ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳು(Coastal Districts), ಶಿವಮೊಗ್ಗ(Shivamogga), ಚಿತ್ರದು(Chitradurga)ರ್ಗ, ಕೊಡಗು(Kodagu) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯನಗರ(Vijayanagar), ದಾವಣಗೆರೆ(Davangere), ಹಾವೇರಿ(Haveri), ಗದಗ(Gadag), ಧಾರವಾಡ(Dharwad), ಉತ್ತರ ಕನ್ನಡ(Uttar Kannada) ಜಿಲ್ಲೆಗಳಲ್ಲಿ ಕೂಡ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ(Silicon City) ಇಂದು ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಈಗಾಗಲೇ ಕರಾವಳಿ(Karavali), ಮಲೆನಾಡು ಪ್ರದೇಶ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಕಲಬುರಗಿಯಲ್ಲಿ(Kalburgi) 36.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ(Bangalore) ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.