ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ.
ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ ಆಗಸ್ಟ್ 26ಕ್ಕೆ ತೆರೆಗೆ ಬರುತ್ತಿದ್ದು, ಚಿತ್ರತಂಡ ಒಂದೊಂದೇ ಹಾಡುಗಳನ್ನು ಅನಾವರಣ ಮಾಡ್ತಿದೆ. ಇದೀಗ ಮೋಡಕ್ಕೆ ಮೋಡ ಎಂಬ ಮೆಲೋಡಿ ಗಾನ ಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ.
ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಈ ಹಾಡಿಗೆ ರಾಕ್ ಅಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.
ಹಲವಾರು ಧಾರಾವಾಹಿಗಳ ಮೂಲಕ ಕಿರುತೆರೆಯಲ್ಲಿ ಮಿಂಚಿರುವ ಯಶವಂತ್ ಹೀರೋ ಆಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ. ಡ್ರಾಮಾ, ಎಮೋಷನಲ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣ ವಿಕಿಪೀಡಿಯ ಚಿತ್ರದಲ್ಲಿದೆ.
ಚಿದಾನಂದ್ ಎಚ್.ಕೆ. ಛಾಯಾಗ್ರಹಣ, ರಾಕೇಶ್ ಮತ್ತು ನೀಲಿಮ ಸಂಗೀತ, ರವಿಚಂದ್ರನ್ ಸಿ. ಸಂಕಲನ ಚಿತ್ರಕ್ಕಿದೆ. ರಫ್ ಕಟ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗಿರುವ ಸಿನಿಮಾ ಆಗಸ್ಟ್ 26ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.