ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವನ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತೇಕಾಲು ಪೋಡಿ ಗ್ರಾಮದಲ್ಲಿ ನಡೆದಿದೆ.
ಮಾದೇಶ್(45) ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ.

ಬೈಲೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಣ್ಣು ಕಾಣದ ವ್ಯಕ್ತಿ ಒಬ್ಬರ ಮೇಲೆ ಭಾನುವಾರ ಮಧ್ಯಾಹ್ನ 3:೦೦ ಘಂಟೆ ಸುಮಾರಿಗೆ ದಾಳಿ ನಡೆದಿದ್ದು ಸಂತ್ರಸ್ತರ ಕೈ – ಕಾಲು ಮುರಿದಿದೆ.
ದಾಳಿ ನಡೆದು ಸುಮಾರು ಘಂಟೆಗಳ ಕಾಲ ಆದರೂ ಕುಟುಂಬಸ್ಥರಿಗೆ ಧನ ಮೇಯಿಸಲು ಬಂದ ಯುವಕರಿಂದ ವಿಚಾರ ಬೆಳಕಿಗೆ ಬಂದಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.