• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?
Share on WhatsAppShare on FacebookShare on Telegram
ADVERTISEMENT

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಆಸ್ತಿಯನ್ನು ವಶಪಡಿಸಿಕೊಳ್ಳಲು ಹಾಗೂ ಜಪ್ತಿ ಮಾಡಲು ಸರ್ಕಾರ ಕೈ ನಾಯಕರು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯದ ಬಳ್ಳಾರಿ. ತುಮಕೂರು, ಚಿತ್ರದುರ್ಗ ಮತ್ತು ಇನ್ನಿತರ ಭಾಗಗಳಲ್ಲಿ ಅತ್ಯಂತ ಉತ್ಕೃಷ್ಟವಾದ ಕಬ್ಬಿಣದ ಅದಿರು ಲಭ್ಯವಾಗುತ್ತಿರುವುದನ್ನು ಗಮನಿಸಿದ ಕೆಲವು ಗಣಿ ಮಾಲೀಕರು 2000 ಇಸವಿಯಿಂದ ಅಕ್ರಮವಾಗಿ ಗಣಿಗಾರಿಕೆ ಮಾಡಿ ಲೂಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷದ ನಾಯಕತ್ವವು ವಿಧಾನ ಪರಿಷತ್ತಿನಲ್ಲಿ ಹೋರಾಟ ಮಾಡಿ ಹಗರಣವನ್ನು ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್ ಆಯೋಗಕ್ಕೆ ತನಿಖೆ ಮಾಡಲು ಒಪ್ಪಿಸಲಾಗಿತ್ತು. ನ್ಯಾಯಮೂರ್ತಿ ಶ್ರೀ ಯು.ಎಲ್. ಭಟ್‌ರವರ ಆಯೋಗವು ಇದೊಂದು ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಹಗರಣವಾಗಿರುವುದರಿಂದ ಸಿಬಿಐ ತನಿಖೆಗೆ ವಹಿಸುವುದು ಸೂಕ್ತವೆಂದು ಆದೇಶ ಮಾಡಿತ್ತು. ಆದರೆ ಅದನ್ನು ಅಂದಿನ ರಾಜ್ಯ ಸರ್ಕಾರ ಒಪ್ಪಲಿಲ್ಲ. ಅದನ್ನು ವಿರೋಧಿಸಿ ವಿಧಾನ ಪರಿಷತ್ತಿನಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ನಾಯಕತ್ವ ಮಾಡಿದ ಹೋರಾಟದಿಂದ ಅಂದಿನ ಸರ್ಕಾರ ಸದರಿ ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು.

ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ಆ ಸಮಿತಿಯು ಅಕ್ರಮ ಗಣಿಗಾರಿಕೆಯ ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ. ದಿನಾಂಕ: 16-11-2008 ರಂದು ವರದಿ ನೀಡಿ. “ಹತ್ತಾರು ಸಾವಿರ ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ಕೆಲವರು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಆದ್ದರಿಂದ ಅಕ್ರಮ ಗಣಿಗಾರಿಕೆ ವಿಷಯವನ್ನು ಸಿಬಿಐ ತನಿಖೆ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ ರಾಜ್ಯದ ಸಂಪತ್ತನ್ನು ಉಳಿಸಬೇಕು” ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು.

ವ್ಯಕ್ತಿಗಳು/ಸಂಘ-ಸಂಸ್ಥೆಗಳು, ರಾಜಕಾರಣಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1.0 ಲಕ್ಷ ಕೋಟಿಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ. ಇದನ್ನು ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಸಹ ಭ್ರಷ್ಟಾಚಾರವನ್ನು ಉತ್ತೇಜಿಸಿಲ್ಲ ಹಾಗೂ ಸಹಕಾರವನ್ನೂ ನೀಡಿರುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವುದೇ ಕಾಂಗ್ರೆಸ್ ಪಕ್ಷದ ಧೈಯವೆಂದು ಪಕ್ಷವು ಭಾವಿಸಿಕೊಂಡು ಬಂದಿರುತ್ತದೆ. ಆ ಕಾರಣದಿಂದ ಶ್ರೀ ರಾಹುಲ್‌ ಗಾಂಧಿ. ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರು ಭ್ರಷ್ಟಾಚಾರದ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಆದ್ದರಿಂದ ರಾಜ್ಯ ಸರ್ಕಾರ ಶ್ರೀ ಹೆಚ್.ಕೆ. ಪಾಟೀಲ್‌ ರವರ ನೇತೃತ್ವದ ಉಪ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿರಲಿ, ಯಾವುದೇ ಅಧಿಕಾರಿಗಳಾಗಿರಲಿ ಅವರ ವಿರುದ್ಧ ಕ್ರಮ ಜರಗಿಸುವಂತೆ ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡಿದೆ. ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು. 

ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ‘ಸತ್ಯ ಶೋಧನಾ ಸಮಿತಿ’ಯನ್ನು ಶ್ರೀ ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಅಮರೇಗೌಡ ಬಯ್ಯಾಮರ, ಶ್ರೀ ವಿ.ಮುನಿಯಪ್ಪ, ಶ್ರೀ ಕೆ. ಶಿವಮೂರ್ತಿ ನಾಯಕ್‌ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು.

CM Siddaramaiah: ಸಿಎಂ ಸಿದ್ದರಾಮಯ್ಯ ಮಾತಿಗೆ ಅಧಿಕಾರಿಗಳು ನಗು..! #siddaramaiah #congress
Tags: BJPcongresscongress government in karnatakaDK ShivakumarHK PatilkaranatakacongresskarnatakacmKhargeRahul Gandhisiddaramaiah
Previous Post

ಬ್ಯಾಲೆಟ್ ಪೇಪರ್ ನಿಂದ ನಿಷ್ಪಕ್ಷಪಾತ ಚುನಾವಣೆ ನಡೆಸಿ ಇಡೀ ರಾಷ್ಟ್ರಕ್ಕೆ ತೋರಿಸುತ್ತೇವೆ : ಬಿ.ಕೆ ಹರಿಪ್ರಸಾದ್ 

Next Post

“ಮರಳಿ ಮನಸಾಗಿದೆ” ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post

"ಮರಳಿ ಮನಸಾಗಿದೆ" ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada