ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇರೋ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದೆ. ಹೈಕೋರ್ಟ್ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ.
ದರ್ಶನ್ ಮೆಡಿಕಲ್ ರಿಪೋರ್ಟ್ ಕೋರ್ಟ್ಗೆ ಸಲ್ಲಿಕೆ ಆದ ಬಳಿಕ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದ್ದಾರೆ. ಕೂಡಲೇ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದಾರೆ.
ಈ ವೇಳೆ ವೈದ್ಯಕೀಯ ವರದಿ ಪ್ರತಿ ತಮಗೂ ನೀಡುವಂತೆ ನಿರ್ದೇಶಿಸಲು ಎಸ್ಪಿಪಿ ಮನವಿ ಮಾಡಿದ್ದರು. ಮಧ್ಯಂತರ ಜಾಮೀನಿಗೆ ದರ್ಶನ್ ಪರ ವಕೀಲರು ಮನವಿ ಮಾಡಿ, ಕೋರ್ಟ್ಗೆ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ದರ್ಶನ್ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ, ಅಕ್ಟೋಬರ್ 22ರಂದು ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ನ್ಯೂರೋ ಸರ್ಜನ್ ಮೂರು ಅಂಶಗಳನ್ನ ಹೇಳಿದ್ದಾರೆ. ನಂಬ್ ಇದೆ. ರಕ್ತಪರಿಚಲನೆ ಆಗುತ್ತಿಲ್ಲ. ಇಲ್ಲವಾದರೆ ಪ್ಯಾರಾಲಿಸಿಸ್ ಅಗತ್ಯ ಆಗಬಹುದು. ಕಾಲಿಗೆ ಪಾರ್ಶ್ವ ವಾಯು ಅಗುವ ಸಾಧ್ಯತೆ ಇದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಬೆಂಗಳೂರು ಬಳ್ಳಾರಿಯಲ್ಲಿ ಚಿಕಿತ್ಸೆ ನೀಡಬಹುದು ಅಂತಾ ವರದಿಯಲ್ಲಿ ಇದೆ. ಫಿಸಿಯೋಥೆರಪಿ ಮತ್ತು ಆಪರೇಷನ್ಗೆ ಸೂಚಿಸಲಾಗಿದೆ ಎಂದಿದ್ದಾರೆ. ನಾಳೆಗೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್, ಬೆಂಗಳೂರು ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಅಂತಾ ವರದಿಯಲ್ಲಿ ಇದೆ. ನಾಳೆ 2.30 ಕ್ಕೆ ಮತ್ತೆ ಜಾಮೀನು ಅರ್ಜಿ ವಿಚಾರಣೆ ಮುಂದುವರಿಸೋಣ, ಎರಡೂ ಕಡೆ ವಕೀಲರಿಗೆ ವೈದ್ಯಕೀಯ ವರದಿ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.
ಮಧ್ಯಂತರ ಜಾಮೀನು ನೀಡಲು ಎಸ್ಪಿಪಿ ವಿರೋಧ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಅದೂ ಅಲ್ಲದೆ ಬೆಂಗಳೂರು, ಬಳ್ಳಾರಿಯಲ್ಲಿ ಚಿಕಿತ್ಸೆ ಲಭ್ಯವಿದೆ ಎಂದಿದ್ದಾರೆ. ನಾಳೆ ಮತ್ತೆ ವಿಚಾರಣೆ ನಡೆಯಲಿದ್ದು, ಮಧ್ಯಂತರ ಜಾಮೀನು ಸಿಗುತ್ತಾ ಅನ್ನೋ ಬಗ್ಗೆ ಕುತೂಹಲ ಮೂಡಿಸಿದೆ.