• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ -ಸಚಿವ ಸುನಿಲ್ ಕುಮಾರ್

Any Mind by Any Mind
September 17, 2021
in Uncategorized
0
ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ -ಸಚಿವ ಸುನಿಲ್ ಕುಮಾರ್
Share on WhatsAppShare on FacebookShare on Telegram

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಈಗಾಗಲೇ ಉದ್ದೇಶಕ್ಕಾಗಿ ನಾಲ್ಕು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ADVERTISEMENT

ಶುಕ್ರವಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಮಾಲೂರಿನ ಶಿವಾರಪಟ್ಟಣದಲ್ಲಿ ನಾಲ್ಕು ಎಕರೆ ಜಾಗದಲ್ಲಿ ಶಿಲ್ಪಕಲಾ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ, ಇದು ಕುಶಲಕರ್ಮಿಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಭಗವಾನ್ ವಿಶ್ವಕರ್ಮ ಈ ಜಗತ್ತಿನ ಮೊಟ್ಟಮೊದಲ ಇಂಜಿನಿಯರ್ ಎಂದು ಬಣ್ಣಿಸಿದ ಸಚಿವ ಸುನಿಲ್ ಕುಮಾರ್  ರಾಮಾಯಣ ಮತ್ತು ಮಹಾಭಾರತದಲ್ಲು ವಿಶ್ವಕರ್ಮರ ಉಲ್ಲೇಖವಿದೆ ಪಾಂಡವರಿಗಾಗಿ ಇಂದ್ರಪ್ರಸ್ಥ ವನ್ನು ನಿರ್ಮಾಣ ಮಾಡಿದ್ದು, ದ್ವಾರಕ್ಕೆ ನಗರ ನಿರ್ಮಾಣ ಮಾಡಿದ್ದು ಹಾಗೂ ಸ್ವರ್ಣವಲ್ಲಿ ಲಂಕೆಯ ನಿರ್ಮಾತೃ ಕೂಡ ವಿಶ್ವಕರ್ಮರ ಎಂದು ನಮ್ಮ ಪೌರಾಣಿಕ ಐತಿಹ್ಯ ತಿಳಿಸುತ್ತದೆ ಎಂದರು.

ಹಿಂದುಳಿದ ಅನೇಕ ಸಣ್ಣ ,ಸಣ್ಣ ಸಮುದಾಯಗಳು ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೆಳೆಯಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಸಶಕ್ತ ವಾಗಬೇಕಾದರೆ ಎಲ್ಲ ಹಿಂದುಳಿದ ಸಣ್ಣ ಸಮುದಾಯಗಳು ಒಗ್ಗೂಡಿ ಕೆಲಸ ಮಾಡಬೇಕು. ಅದರಲ್ಲಿಯೂ ವಿಶೇಷವಾಗಿ ವಿಶ್ವಕರ್ಮ ಸಮುದಾಯ ತನ್ನ ವೃತ್ತಿಪರತೆ, ಸರಳತೆ ಮತ್ತು ಕರ್ತವ್ಯ ನಿಷ್ಠೆಗೆ ಹೆಸರಾಗಿದೆ ಈ ಸಮುದಾಯ ತನ್ನ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಸಾಗಿಸಬೇಕಾದ ಅವಶ್ಯಕತೆ ಇದೆ ಎಂದರು.

ಎಲ್ಲ ಮಹನೀಯರ ಜಯಂತಿಗಳ ಉದ್ದೇಶ ಆಯಾ ಮಹಾಪುರುಷರು ಪಾಲಿಸಿದ ಜೀವನಾದರ್ಶಗಳ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕು ಮತ್ತು ಅದನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂಬುದೇ ಆಗಿದೆ ಹಾಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಜಯಂತಿಗಳನ್ನು ವಿಶೇಷ ಮುತುವರ್ಜಿಯಿಂದ ಮಾಡುತ್ತಿದೆ ಎಂದರು.

Tags: BJPಜಕಣಾಚಾರಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿವಿಶ್ವಕರ್ಮ ಜಯಂತಿಶಿಲ್ಪಕಲಾ ಕೇಂದ್ರಶಿವಾರಪಟ್ಟಣಸುನಿಲ್ ಕುಮಾರ್
Previous Post

ಉದ್ಯೋಗ ಸೃಷ್ಟಿಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ: ಬಸವರಾಜ ಬೊಮ್ಮಾಯಿ

Next Post

ದೇಶದ ಜನಪರ ದನಿಗಳ ದಮನದ ರಾಜಕೀಯ ದಂಡವಾದವೇ ಐಟಿ- ಇಡಿ?

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ದೇಶದ ಜನಪರ ದನಿಗಳ ದಮನದ ರಾಜಕೀಯ ದಂಡವಾದವೇ ಐಟಿ- ಇಡಿ?

ದೇಶದ ಜನಪರ ದನಿಗಳ ದಮನದ ರಾಜಕೀಯ ದಂಡವಾದವೇ ಐಟಿ- ಇಡಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada