• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, October 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದುʼ – ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 7, 2021
in ಕರ್ನಾಟಕ
0
ʼಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದುʼ – ಸಿದ್ದರಾಮಯ್ಯ
Share on WhatsAppShare on FacebookShare on Telegram

ʼಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು.‌ ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕುʼ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ಪಕ್ಷ ಸೇರ್ಪಡೆ, ಸಹಾಯ ಹಸ್ತ, ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.‌

ADVERTISEMENT

ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ʼಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ. ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಜಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆʼ ಎಂದು ಹೇಳಿದ್ದಾರೆ.

ʼಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ಬರುವ ಮಾಹಿತಿ ಇದೆ. ಒಂದು, ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು.ಇದು ದೊಡ್ಡ ಸಾಂಕ್ರಾಮಿಕ ರೋಗ. ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು.ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಡು ಹೆಚ್ಚು ಜನ ಮರಣ ಹೊಂದಿದ್ದಾರೆ. ಮೂರೂವರೆ ಲಕ್ಷ ಮಂದಿ ಸತ್ತಿರಬಹುದುʼ ಎಂದು ತಿಳಿಸಿದ್ದಾರೆ..

ಮುಂದಕ್ಕೆ ಮಾತನಾಡಿದ ಅವರು ʼಪ್ರಧಾನಿ ನರೇಂದ್ರ ಮೋದಿಯವರು ಅಚ್ಛೇ ದಿನ್ ಬರುತ್ತದೆ ಎಂದರೆ ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ. ಯಡಿಯೂರಪ್ಪ ಅವರು ಈಗಾಗಲೇ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಜನರಿಗೆ ಒಳ್ಳೆಯದಾಗಬೇಕಾದರೆ ಈ ಸರ್ಕಾರ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕುʼ. ಎಂದು ಹೇಳಿದ್ದಾರೆ.

ʼಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು  ಸಾವಿರ ಕೋಟಿ. ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು. ಬಿಜೆಪಿ ಎಂದರೆ ತಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸʼ  ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ ಎಂದಿದ್ದಾರೆ.

Tags: BjpKaranatakaBS YADIYURAPPAKPCCsiddaramaiah
Previous Post

ದೀದಿಗೆ ಸಿಎಂ ಸ್ಥಾನ ಉಳಿಸುವ ಧಾವಂತ: ಪಶ್ಚಿಮ ಬಂಗಾಳದಲ್ಲಿ ಮೇಲ್ಮನೆ ರಚನೆಗೆ ನಿರ್ಣಯ ಅಂಗೀಕಾರ

Next Post

ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ

Related Posts

Peacock motif at Mysuru Dasara: Minister K.J. George lauds drone show that set a Guinness record
Top Story

ಮೈಸೂರು ದಸರಾದಲ್ಲಿ ನವಿಲಿನ ಚಿತ್ತಾರ: ಗಿನ್ನಿಸ್ ದಾಖಲೆ ಬರೆದ ಡ್ರೋನ್ ಪ್ರದರ್ಶನಕ್ಕೆ ಸಚಿವ ಕೆ.ಜೆ. ಜಾರ್ಜ್ ಶ್ಲಾಘನೆ

by ಪ್ರತಿಧ್ವನಿ
October 22, 2026
0

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC) ಆಯೋಜಿಸಿದ್ದ ಬೃಹತ್ ಡ್ರೋನ್ ಪ್ರದರ್ಶನವು ಹೊಸ ಗಿನ್ನಿಸ್ ದಾಖಲೆ...

Read moreDetails
Firecrackers burst from midnight until dawn: Actress Ramya expresses outrage against Fun World

ಮಧ್ಯರಾತ್ರಿಯಿಂದ ಮುಂಜಾನೆವರೆಗೂ ಪಟಾಕಿ ಸಿಡಿತ  : ಫನ್ ವರ್ಲ್ಡ್ ವಿರುದ್ಧ ನಟಿ ರಮ್ಯಾ ಆಕ್ರೋಶ

October 22, 2026
CM, DK Shivakumar urge Wildlife Board to approve Sharavathi and Mekedatu projects

ಶರಾವತಿ, ಮೇಕೆದಾಟು ಯೋಜನೆಗಳಿಗೆ ವನ್ಯಜೀವಿ ಮಂಡಳಿ ಅನುಮೋದನೆಗೆ ಸಿಎಂ ಡಿಕೆಶಿ ಮನವಿ

October 22, 2026
'Golden Chariot' to resume operations in a new avatar from October 24: Minister K.J. George shares details

ಅಕ್ಟೋಬರ್ 24ರಿಂದ ಹೊಸ ರೂಪದಲ್ಲಿ ‘ಗೋಲ್ಡನ್ ಚಾರಿಯಟ್’ ಸಂಚಾರ: ಸಚಿವ ಕೆ.ಜೆ. ಜಾರ್ಜ್ ಮಾಹಿತಿ

October 22, 2026
South-East Graduates' Constituency: Vigorous campaigning in support of Congress candidate Shashi Hulikuntemath

ಪದವೀಧರರ ಧ್ವನಿಯಾಗಿ ಶಶಿ ಹುಲಿಕುಂಟೆಮಠ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಯುವ ನಾಯಕತ್ವದ ಭರವಸೆ

October 22, 2026
Next Post
ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ

ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada