• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜಕೀಯ ನಿವೃತ್ತಿಯಾಗುತ್ತೇನೆ, ಆದರೆ ಕಾಂಗ್ರೆಸ್‌ ಸೇರುವುದಿಲ್ಲ: ಶಾಸಕ ಮುನಿರತ್ನ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ಕರ್ನಾಟಕ, ರಾಜಕೀಯ
0
ಶಾಸಕ ಮುನಿರತ್ನ
Share on WhatsAppShare on FacebookShare on Telegram

ನಗರದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆಪರೇಷನ್ ಕಾಂಗ್ರೆಸ್ ಕುರಿತ ಚರ್ಚೆಗೆ ಬುಧವಾರ (ಆಗಸ್ಟ್ 16) ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಬುಧವಾರ ನಗರದ ವೈಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ವಲಸೆ ಬಂದಿರುವ 17 ಜನರಲ್ಲಿ ಯಾರು ಹೋಗುತ್ತಾರೋ ಗೊತ್ತಿಲ್ಲ, ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಆಗುತ್ತೇನೆ, ಕಾಂಗ್ರೆಸ್ಗೆ ಹೋಗುವ ಅವಶ್ಯಕತೆ ನನಗೆ ಇಲ್ಲ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕುರಿತ ಪ್ರಶ್ನೆಗೆ, ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಚಿವರು, ಹೀಗಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಭೇಟಿಯಾಗಿರುತ್ತೇವೆ ಹೊರತು, ಅವರ ಜೊತೆ ಯಾವುದೇ ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ ಎಂದು ಶಾಸಕ ಮುನಿರತ್ನ ತಿಳಿಸಿದರು.

“ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ಕೊಡುತ್ತಾರಾ ಅಥವಾ ಬೆಂಗಳೂರಿನ ಸಚಿವರಾಗಿ ಉತ್ತರ ಕೊಡುತ್ತಾರಾ ನನಗೆ ಗೊಂದಲ ಆಗುತ್ತಿದೆ. ಯಾರಾದರೂ ಅವರ ಮನೆಗೆ ಹಿಂಬಾಗಿನಿಂದ ಹೋಗಿದ್ದಾರಾ, ಬುರ್ಖಾ ಹಾಕಿಕೊಂಡು ಹೋಗಿದ್ದಾರಾ? ಮೊದಲು ಅವರು ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಎಲ್ಲರನ್ನೂ ಕರೆದು ಸಭೆ ಮಾಡಲಿ” ಎಂದು ಹೇಳಿದರು.

ಶಾಸಕರಿಗೆ ಅನುದಾನ ಬಿಡುಗಡೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, “ಮೊದಲು ಅವರ ಶಾಸಕರಿಗೆ ಅನುದಾನ ಕೊಡಲಿ, ನಂತರ ನಮಗೆ ಕೊಡಲಿ” ಎಂದು ಅನುದಾನ ಸಿಗದೇ ಇರುವ ಬಗ್ಗೆ ಶಾಸಕ ಮುನಿರತ್ನ ಮಾರ್ಮಿಕವಾಗಿ ಹೇಳಿದರು.

“ಪಕ್ಷ ಬಿಟ್ಟು ಬಂದರೂ, ವೈಯಕ್ತಿಕವಾಗಿ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜೊತೆ ಯಾವುದೇ ದ್ವೇಷ ಇಲ್ಲ. ಆದರೆ, ಅಧಿಕಾರಕ್ಕೋಸ್ಕರ ನಾನು ಪಕ್ಷ ಬಿಟ್ಟು ಹೋಗುವುದಿಲ್ಲ. ಮುಂದಿನ 5 ವರ್ಷ ನಾನು ವಿಪಕ್ಷದಲ್ಲಿಯೇ ಇರುತ್ತೇನೆ. ಆದರೆ ಆರ್ಆರ್ ನಗರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು, ಆದರೆ ರಾಜರಾಜೇಶ್ವರಿ ತಾಯಿಯ ಕೃಪೆಯಿಂದ ಗೆದ್ದಿದ್ದೇನೆ” ಎಂದರು.

ಬಿಜೆಪಿಯಲ್ಲಿ ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವದಿಂದ ಮಾತಾಡಿಸುತ್ತಾರೆ, ಎಂದೂ ಏಕವಚನದಿಂದ ಮಾತಾಡಿಸಿಲ್ಲ ಎಂದು ಶಾಸಕ ಮುನಿರತ್ನ ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ಗುರು ಎಂಬ ಎಸ್.ಟಿ. ಸೋಮಶೇಖರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ,” ಅದು ಅವರ ವೈಯಕ್ತಿಕ ಅಭಿಪ್ರಾಯ, ನಾನೂ ಡಿಕೆ ಶಿವಕುಮಾರ್ 40 ವರ್ಷಗಳ ಸ್ನೇಹಿತರು. ನನ್ನ ಜೀವನದ ಗುರು ಹಾಗೂ ರಾಜಕೀಯ ಗುರು ಬಿ.ಕೆ. ಹರಿಪ್ರಸಾದ್. ಅದು ರಾಜಕೀಯ ಕಾರಣ ಅಲ್ಲ, ಅದು ನಮ್ಮ ಊರಿನ ಸಂಬಂಧ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆ, ಬಿಜೆಪಿ ಬಗ್ಗೆ ನಂಬಿಕೆ, ಗೌರವ ಇದೆ” ಎಂದು ಪುಸರುಚ್ಛರಿಸಿದರು.

“ಆರ್. ಆರ್. ನಗರದಲ್ಲಿ ಆಗಿರುವ ಕಾಮಗಾರಿಗಳ ತನಿಖೆ ಆದರೆ ಅದು 28 ಕ್ಷೇತ್ರಗಳಿಗೂ ಅನ್ವಯಿಸಬೇಕು. ಅಧಿಕಾರಿಗಳು ತಿರುಚಿ ಬರೆದರೆ ಆ ದಾಖಲೆಗಳು ಬಳಿಕ, ಮೇಲಿನ ದೊಡ್ಡ ತನಿಖಾ ಸಂಸ್ಥೆಗಳಿಗೆ ಹೋಗುತ್ತದೆ. ಅಧಿಕಾರಿಗಳು ಎಚ್ಚರಿಕೆಯಿಂದ ತನಿಖೆ ಮಾಡಬೇಕು. ಅವರು ಸ್ಥಳಕ್ಕೆ ಹೋಗಿ ಸಮಗ್ರ ತನಿಖೆ ಮಾಡಿದರೆ ಅವರಿಗೇ ಒಳ್ಳೆಯದು. ಇಲ್ಲದಿದ್ದರೆ ಅದೇ ಅವರಿಗೆ ಮುಳುವಾಗುತ್ತದೆ. ಡಿ.ಕೆ. ಶಿವಕುಮಾರ್ 224 ಕ್ಷೇತ್ರಗಳಿಗೂ ಸಚಿವರು, ಆದರೆ ಅವರು ಆರ್.ಆರ್. ನಗರ ಬಗ್ಗೆ ಮಾತ್ರ ಮಾತಾಡುತ್ತಾರೆ. ನನ್ನ ಅವರ 40 ವರ್ಷಗಳ ಸ್ನೇಹದಿಂದ ಅವರಿಗೆ ನನ್ನ ಮೇಲೆ ಅಭಿಮಾನ ಜಾಸ್ತಿ” ಎಂದು ಶಾಸಕ ಮುನಿರತ್ನ ವ್ಯಂಗ್ಯವಾಡಿದರು.

“ನನ್ನ ಕ್ಷೇತ್ರ ಅಭಿವೃದ್ಧಿ ಮಾಡಿಕೊಟ್ಟರೆ ಬೇಕಾದರೆ. ಶಾಸಕ ಸ್ಥಾನವನ್ನೇ ಬಿಟ್ಟುಕೊಡುತ್ತೇನೆ. ಯಾರಾದರೂ ಬಿಜೆಪಿ ತೊರೆದರೆ ಅವರನ್ನು ಮನವೊಲಿಸುವ ಕೆಲಸ ಮಾಡಲ್ಲ. ಅದು ನನಗೆ ಅವಶ್ಯಕತೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? 77ನೇ ಸ್ವಾತಂತ್ರ್ಯೋತ್ಸವ | ರಾಜ್ಯದ ಅಭಿವೃದ್ಧಿ ಮಂತ್ರ ಜಪಿಸಿದ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಶೇ.70 ಕಾರ್ಮಿಕರು ವಲಸೆ ಹೋಗಿದ್ದಾರೆ, ಕಾಮಗಾರಿಗಳು ಸ್ಥಗಿತಗೊಂಡಿವೆ. ಬಿಬಿಎಂಪಿಯಲ್ಲಿ ಇರುವ ಅನುದಾನದಲ್ಲಿ ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಅನುದಾನ ಕೊಡಬಹುದು. ಈಗಿರುವ ಅಧಿಕಾರಿಗಳೇ ಹಿಂದಿನ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ್ದಾರೆ ಎಂದು ಮುನಿರತ್ನ ತಿಳಿಸಿದರು.

“ಬಿಜೆಪಿ ಶಾಸಕರಿಗೆ ಅನುದಾನ ಕೊಟ್ಟಿಲ್ಲ ಅಂದರೂ ಚಿಂತೆ ಇಲ್ಲ, ಅವರ ಶಾಸಕರಿಗಾದರೂ ಕೊಡಲಿ. ಕೆಲಸ ಮಾಡದ ಗುತ್ತಿಗೆದಾರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆಗಿದ್ದರೆ ಅವರ ಸಮಸ್ಯೆ ಹೇಗೆ ಅರ್ಥ ಆಗುತ್ತದೆ. ಪ್ರಚಾರಕ್ಕಾಗಿಯೋ ಇನ್ನೊಂದಕ್ಕೋ ಅಧ್ಯಕ್ಷರಾದರೆ ಸಮಸ್ಯೆ ಕೇಳುವವರು ಯಾರು, ಕೆಲಸ ಮಾಡುವ ಗುತ್ತಿಗೆದಾರ ಅಧ್ಯಕ್ಷ ಆಗಿರುತ್ತಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ” ಎಂದು ಶಾಸಕ ಮುನಿರತ್ನ ಪರೋಕ್ಷವಾಗಿ ಕೆಂಪಣ್ಣ ವಿರುದ್ಧ ಕಿಡಿ ಕಾಡಿದರು.

Tags: BJP GovernmentMLA MuniratnaMuniratnaಬಿಜೆಪಿಶಾಸಕ ಮುನಿರತ್ನ
Previous Post

ಇಂದು ಬಿಜೆಪಿ ಚುನಾವಣಾ ಸಮಿತಿ ಸಭೆ | ಪಂಚರಾಜ್ಯಗಳ ಚುನಾವಣಾ ತಂತ್ರ ಚರ್ಚೆ ಸಾಧ್ಯತೆ

Next Post

ಮಂತ್ರಾಲಯ | ಆ.29ರಿಂದ ರಾಯರ 352ನೇ ಆರಾಧನಾ ಮಹೋತ್ಸವ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಮಂತ್ರಾಲಯ

ಮಂತ್ರಾಲಯ | ಆ.29ರಿಂದ ರಾಯರ 352ನೇ ಆರಾಧನಾ ಮಹೋತ್ಸವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada