• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಮಲತಾ ಅಂಬರೀಷ್‌ ಮತ್ತೆ ಪಕ್ಷೇತರ ಅಭ್ಯರ್ಥಿ ಆಗ್ತಾರಾ..? ಮೈತ್ರಿ ಎಫೆಕ್ಟ್‌..

ಕೃಷ್ಣ ಮಣಿ by ಕೃಷ್ಣ ಮಣಿ
September 10, 2023
in ಕರ್ನಾಟಕ, ರಾಜಕೀಯ
0
ʻಅಕ್ರಮ ಸಮರ್ಥನೆ ಮಾಡ್ಕೊಂಡು ಬರುವವರಿಗೆ ಯುಪಿ ಮಾಡೆಲ್ ಭಯ ಆಗಲ್ವಾʼ..?: ಹೆಚ್‌.ಡಿ.ಕೆ.ಹೇಳಿಕೆಗೆ ಸುಮಲತಾ ಟಾಂಗ್‌..!
Share on WhatsAppShare on FacebookShare on Telegram

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕಿಳಿದು ಜಯ ಸಾಧಿಸಿದ್ದ ಸುಮಲತಾ ಅಂಬರೀಷ್‌ ಕ್ಷೇತ್ರ ಕಳೆದುಕೊಳ್ತಾರಾ..? ಅನ್ನೋ ಪ್ರಶ್ನೆ ಸೃಷ್ಟಿಯಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ JDS ವಿರುದ್ಧ ತೊಡೆ ತಟ್ಟಿ ಗೆಲುವು ಸಾಧಿಸಿದ್ದರು. ಆದರೆ ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಜೆಡಿಎಸ್‌, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಹೊರ ಬೀಳಲಿದೆ. ಆದರೆ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿ ಆಗಿ ಗೆಲುವು ಕಂಡಿದ್ದ ಸುಮಲತಾ ಅಂಬರೀಷ್‌‌ ಇಕ್ಕಟ್ಟಿಗೆ ಸಿಲುಕಿದ್ದಾರೆ ಎನಿಸುತ್ತಿದೆ.

ADVERTISEMENT

ಬಿಜೆಪಿ ಬೆಂಬಲಿಸಿ ಸಂಕಷ್ಟಕ್ಕೆ ಸಿಲುಕಿದ್ರಾ ಸಂಸದೆ ಸುಮಲತಾ..?

ಸಂಸದರಾಗಿ ಆಯ್ಕೆಯಾದ ಬಳಿಕ ಸುಮಲತಾ ಅಂಬರೀಷ್‌ ಅವರು ಸಾಕಷ್ಟು ವರ್ಷಗಳ ಕಾಲ ಪಕ್ಷೇತರ ಸಂಸದೆ ಆಗಿಯೇ ಉಳಿದಿದ್ದ ಸುಮಲತಾ, ಕೊನೆಯ ಒಂದೂವರೆ ವರ್ಷ ಇದ್ದ ಹಾಗೆ ನಾನು ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಬಹಿರಂಗವಾಗಿ ಹೇಳಿಕೊಂಡರು. ವಿಧಾನಸಭಾ ಚುನಾವಣೆಗೂ ಮುನ್ನ ಬೆಂಬಲ ಘೋಷಣೆ ಮಾಡಿ, ತನ್ನ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಿ ಚುನಾವಣೆಯಲ್ಲಿ ಗೆಲ್ಲಿಸುವ ಪ್ರಯತ್ನ ಮಾಡಿದ್ದರು. ಆದರೆ ಫಲ ಕೊಡಲಿಲ್ಲ ಅಷ್ಟೆ. ಇದೀಗ ಬಿಜೆಪಿ ಹಾಗು ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಕಾರಣಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡುವ ನಿರ್ಧಾರಕ್ಕೆ ಬಂದಿರುವುದು ಸುಮಲತಾ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಕ್ಕೆ ತೆರಳ್ತಾರಾ ಸುಮಲತಾ..?

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ನಿರ್ಧಾರಕ್ಕೆ ಬಂದಿರುವ ಬಿಜೆಪಿ ನಾಯಕರು, ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಬೇರೆ ಕ್ಷೇತ್ರಕ್ಕೆ ಕರೆದುಕೊಂಡು ಹೋಗಲು ಬಿಜೆಪಿ ನಾಯಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸಂಸದರಾಗಿರುವ ಡಿವಿ ಸದಾನಂದಗೌಡರಿಗೆ ಈ ಬಾರಿ ಟಿಕೆಟ್‌ ನೀಡದೆ ಇರಲು ಬಿಜೆಪಿ ಹೈಕಮಾಂಡ್‌ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇದೇ ಕ್ಷೇತ್ರಕ್ಕೆ ಸುಮಲತಾ ಅವರನ್ನು ಕರೆದುಕೊಂಡು ಬರುವ ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಆದರೆ ಸುಮಲತಾ ಕಳೆದ ಬಾರಿ ಜೆಡಿಎಸ್‌ ವಿರುದ್ಧ ಹೋರಾಟ ಮಾಡಿ ಗೆಲುವು ಸಾಧಿಸಿದ್ದ ಸುಮಲತಾ, ಈ ಬಾರಿ ಅಷ್ಟು ಸುಲಭವಾಗಿ ಕ್ಷೇತ್ರವನ್ನು ಜೆಡಿಎಸ್‌ ಪಾಲಿಗೆ ಬಿಟ್ಟು ಹೋಗುವುದಕ್ಕೆ ಸಿದ್ಧರಿಲ್ಲ ಎನ್ನುವುದು ಸುಮಲತಾ ಆಪ್ತ ವಲಯದಲ್ಲಿ ಕೇಳಿ ಬರ್ತಿದೆ.

ಸುಮಲತಾ ಸೋತರೂ ಪರವಾಗಿಲ್ಲ, ಜೆಡಿಎಸ್‌ಗೆ ಬಿಡಲ್ಲ..!

ಸುಮಲತಾ ಕಳೆದ ಬಾರಿ ಜೆಡಿಎಸ್‌ ವಿರುದ್ಧ ಗೆಲುವು ಸಾಧಿಸಲು ಪ್ರಮುಖ ಕಾರಣ ಅಂದ್ರೆ ಸಿದ್ದರಾಮಯ್ಯ ಪರೋಕ್ಷವಾಗಿ ಸಪೋರ್ಟ್‌ ಮಾಡಿದ್ದರು. ಇಂದಿನ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಜೆಡಿಎಸ್‌ ವಿರುದ್ಧ ಕೆಲಸ ಮಾಡಿದ್ದರು. ಅಂದರೆ ಪರೋಕ್ಷವಾಗಿ ಕಾಂಗ್ರೆಸ್‌ ಬೆಂಬಲದಿಂದ ಸುಮಲತಾ ಗೆಲುವು ಸಾಧಿಸಿದ್ದರು. ಇದೇ ಕಾರಣಕ್ಕೆ ಈ ಬಾರಿ ಸಂಸದೆ ಸುಮಲತಾ ಅವರು ತಾನು ಸಂಸದೆಯಾಗಿರುವ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡದೆ, ಪಕ್ಷೇತರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲು ನಿರ್ಧಾರ ಮಾಡಲಿದ್ದಾರೆ ಎನ್ನಲಾಗ್ತಿದೆ. ಒಂದು ವೇಳೆ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಅಖಾಡಕ್ಕೆ ಇಳಿದರೆ ಒಂದಿಷ್ಟು ಮತಗಳನ್ನು ಸೆಳೆಯಲಿದ್ದು, ಕಾಂಗ್ರೆಸ್‌ ಗೆಲುವಿಗೆ ಸಹಕಾರಿ ಆಗಲಿದ್ದಾರೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಸಂಸದೆ ಆಗಿ ಗೆಲುವು ಸಾಧಿಸಲು ಸಾಧ್ಯವಿಲ್ಲದಿದ್ದರೂ ಕಾಂಗ್ರೆಸ್‌ ಗೆಲುವಿಗೆ ಸಹಕಾರಿ ಆಗಿ ಋಣ ತೀರಿಸುವ ಕೆಲಸ ಮಾಡುತ್ತಾರೆ ಎನ್ನಲಾಗ್ತಿದೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಸೂಕ್ತ ಉತ್ತರ ಸಿಗಬೇಕಿದೆ.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಮಂಡ್ಯಸಿದ್ದರಾಮಯ್ಯಸುಮಲತಾ ಅಂಬರೀಶ್​
Previous Post

ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸಮರ.. ಗುಟ್ಟೇನು..?

Next Post

ಆಂಧ್ರ ರಾಜಕೀಯ ; ನಟ, ರಾಜಕಾರಣಿ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಪವನ್‌ ಕಲ್ಯಾಣ್‌

ಆಂಧ್ರ ರಾಜಕೀಯ ; ನಟ, ರಾಜಕಾರಣಿ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada