• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್​’ಗೆ ಮತ್ತೆ ಈ ಬಾರಿಯೂ ಲಿಂಗಾಯತರು ಶಾಕ್​ ಕೊಡ್ತಾರಾ..?

ಕೃಷ್ಣ ಮಣಿ by ಕೃಷ್ಣ ಮಣಿ
February 10, 2023
in ಅಂಕಣ
0
ಬಿಬಿಎಂಪಿ ಚುನಾವಣೆ: ಪ್ರಣಾಳಿಕೆ ಸಮಿತಿ ರಚನೆ ಮಾಡಿದ ರಾಜ್ಯ ಕಾಂಗ್ರೆಸ್
Share on WhatsAppShare on FacebookShare on Telegram

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತೆ ಅದಿಕಾರ ಹಿಡಿಯಲು ಸಾಧ್ಯವಾಗದೆ ಇದ್ದಿದ್ದು ಲಿಂಗಾಯತ ಸಮುದಾಯದ ಕೋಪ. ಲಿಂಗಾಯತ ಹಾಗು ವೀರಶೈವ ಎರಡೂ ಬೇರೆ ಬೇರೆ ಎನ್ನುವ ನಿರ್ಧಾರಕ್ಕೆ ಬಂದಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮ ಎಂದು ಘೋಷಣೆ ಮಾಡಬೇಕು ಎಂದು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆಗ ಕಾಂಗ್ರೆಸ್​ ಪಕ್ಷದ ನಾಯಕರೇ ಆಗಿದ್ದ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನೇರವಾಗಿಯೇ ವಾಗ್ದಾಳಿ ಮಾಡಿದ್ದರು. ವೀರಶೈವ ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಚಿವ ಸಂಪುಟ ಸಭೆಯಲ್ಲೇ ಹೇಳಿ ಹೊರಬಂದಿದ್ದರು. ಬಹಿರಂಗವಾಗಿಯೂ ಸಿದ್ದರಾಮಯ್ಯ ನಡೆಯನ್ನು ವಿರೋಧ ಮಾಡಿದ್ದರು. ಅದರಂತೆ ಸರ್ಕಾರ ಅಧಿಕಾರ ಕಳೆದುಕೊಳ್ಳಬೇಕಾಯ್ತು. ಇದೀಗ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ.

ADVERTISEMENT

ಶಾಮನೂರು ನೇತೃತ್ವದಲ್ಲಿ ನಡೆದಿದೆ ಮಹತ್ವದ ಸಭೆ..!

ಕಾಂಗ್ರೆಸ್​ ಚುನಾವಣಾ ಸಮಿತಿ ಟಿಕೆಟ್​ ಯಾರಿಗೆ ನೀಡಬೇಕು..? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುವ ಅಭ್ಯರ್ಥಿ ಎನ್ನುವುದನ್ನು ಅಳೆದು ತೂಗಿ ಟಿಕೆಟ್​ ನೀಡುತ್ತಿದೆ. ಈ ನಡುವೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರು ಸಭೆ ನಡೆಸಿ, ಕಾಂಗ್ರೆಸ್​ನಲ್ಲಿ ಲಿಂಗಾಯತ ಸಮುದಾಯಕ್ಕೆ ಕನಿಷ್ಟ 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಡಬೇಕು ಎನ್ನುವ ಮನವಿ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್​ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಕಳೆದ ಬಾರಿ ಲಿಂಗಾಯತ ಧರ್ಮವನ್ನು ಇಬ್ಭಾಗ ಮಾಡಲು ಪಯತ್ನಿಸಿದ್ದಾರೆ ಅನ್ನೋ ಆರೋಪದಲ್ಲಿ ಅಧಿಕಾರ ಕಳೆದುಕೊಂಡಿದ್ದ ಸಿದ್ದರಾಮಯ್ಯ, ಈ ಬಾರಿ ಲಿಂಗಾಯತರಿಗೆ ಹೆಚ್ಚು ಟಿಕೆಟ್​ ನೀಡಲಿಲ್ಲ ಎನ್ನುವ ಅಪವಾದ ಹೊತ್ತುಕೊಳ್ಳುವ ಸಾಧ್ಯತೆ ಜಾಸ್ತಿಯಾಗಿದೆ.

ಲಿಂಗಾಯತರ ಟಿಕೆಟ್​ ಬೇಡಿಕೆಗೆ ಕಾರಣ ಏನು..?

ವೀರಶೈವ ಲಿಂಗಾಯತ ಸಮುದಾಯ ಪಂಚಮಸಾಲಿ ಸೇರಿದಂತೆ 224 ಕ್ಷೇತ್ರಗಳ ಪೈಕಿ 73 ಕ್ಷೇತ್ರಗಳಲ್ಲಿ ಮತದಾರರು ಹೆಚ್ಚಿದ್ದಾರೆ. ಅಷ್ಟು ಮಾತ್ರ ಅಲ್ಲದೆ 10 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತರು 2ನೇ ಸ್ಥಾನದಲ್ಲಿ ಇದ್ದೇವೆ. 17 ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯದ ಜನಶಂಖ್ಯೆ 3ನೇ ಸ್ಥಾನವಿದೆ. ಉಳಿದ ಕ್ಷೇತ್ರಗಳಲ್ಲೂ 5ನೇ ಸ್ಥಾನದಲ್ಲಿದ್ದೇವೆ. ಕಳೆದ ಬಾರಿ 48 ಟಿಕೆಟ್‌ ನೀಡಲಾಗಿತ್ತು. ಈಗ ಮುಂಬರುವ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ 60 ಕ್ಷೇತ್ರದಲ್ಲಿ ಟಿಕೆಟ್‌ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಹೀಗಾಗಿ ಹೆಚ್ಚಿನ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಸ್ಪರ್ಧಿಸಲು ಅವಕಾಶ ಕೊಟ್ಟರೆ ಗೆಲುವು ಸುಲಭ ಅನ್ನೋದು ಲಿಂಗಾಯತ ಸಮುದಾಯದ ಒತ್ತಾಯ. ಆದರೆ ಕಾಂಗ್ರೆಸ್​ ಕೇವಲ 60 ಜನ ಲಿಂಗಾಯತರಿಗೇ ಮಣೆ ಹಾಕಿದರೆ ಉಳಿದ ಸಮುದಾಯಗಳು ಕೆಂಗಣ್ಣು ಬೀರುವ ಸಾಧ್ಯತೆ ದಟ್ಟವಾಗಿದೆ.

ಟಿಕೆಟ್​ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್​’ಗೆ ಸಂಕಷ್ಟ..!

ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್​, ಕಾಂಗ್ರೆಸ್​ ಪಕ್ಷಕ್ಕೆ ದೇಣಿಗೆ ಸಂಗ್ರಹ ಹಾಗು ಕಾಂಗ್ರೆಸ್​ ಟಿಕೆಟ್​ಗೆ ಅರ್ಜಿ ಹಾಕಿದ್ದಾರೆ ಎಂದಾಗ ಬೇರೆ ಪಕ್ಷಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು ಅನ್ನೋ ಕಾರಣಕ್ಕೆ ಅರ್ಜಿ ಸಲ್ಲಿಸುವಂತೆ ಕರೆ ನೀಡಿದ್ದರು. ಇದೀಗ ಪ್ರತಿಯೊಂದು ಕ್ಷೇತ್ರದಲ್ಲಿ ಹತ್ತಾರು ಜನರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಒಬ್ಬರಿಗೆ ಟಿಕೆಟ್​ ಕೊಟ್ಟಾಗ ಮತ್ತೊಬ್ಬರು ಸಿಡಿದು ಬೀಳುವ ಭಯ ಸೃಷ್ಟಿಯಾಗಿದೆ. ಸಂಧಾನ ಮಾಡುವ ಪ್ರಯತ್ನ ಕೂಡ ನಡೆದಿದ್ದು, ಒಂದು ವೇಳೆ ಸಂಧಾನ ಯಶಸ್ವಿಯಾಗದಿದ್ದರೆ ಬೇರೆ ಪಕ್ಷಗಳ ಕಡೆಗೆ ಮುಖ ಮಾಡಿದರೆ ಮುಂದೇನು ಎನ್ನುವ ಚಿಂತೆ ಕಾಡುತ್ತಿದೆ. ಇದರ ನಡುವೆ ಲಿಂಗಾಯತ ಸಮುದಾಯದಿಂದ 60 ಕ್ಷೇತ್ರಗಳಲ್ಲಿ ಟಿಕೆಟ್​ಗಾಗಿ ಒತ್ತಾಯ ಮಾಡಿರುವುದು ‘ಕೈ’ನೊಳಗೆ ಕಸಿವಿಸಿ ಸೃಷ್ಟಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕಾಂಗ್ರೆಸ್​ ಟಿಕೆಟ್​ ಮುಂದಿನ ವಾರ ಘೋಷಣೆ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ದೆಹಲಿ ಮೂಲಗಳಿಂದ ಹೊರಬಿದ್ದಿದೆ.

Tags: Congress Partyಡಿ. ಕೆ ಶಿವಕುಮಾರ್‌ಲಿಂಗಾಯತ ಸಮುದಾಯಶಾಮನೂರು ಶಿವಶಕರಪ್ಪಸಿದ್ದರಾಮಯ್ಯ
Previous Post

ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ: ಶುಭ್ರ ಸೆಕ್ಸೆನಾ

Next Post

ಕರ್ನಾಟಕದ ಜನರು ಮೂರ್ಖರೋ..? ಅಥವಾ ಬಿಜೆಪಿಯ..

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
BJP ಸರ್ವೆಯಲ್ಲೇ ಬಯಲಾಗಿದೆ ಭಯಾನಕ ವಿಚಾರ..! ಮುಂದೇನು..?

ಕರ್ನಾಟಕದ ಜನರು ಮೂರ್ಖರೋ..? ಅಥವಾ ಬಿಜೆಪಿಯ..

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada