ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು, ಅವರು ಹಿರಿಯರು, ಅನುಭವಿಗಳು, ಈ ಬಗ್ಗೆ ಅವರನ್ನೇ ಕೇಳಿ ಎಂದಷ್ಟೇ ಹೇಳಿ ಜಾರಿಕೊಂಡಿದ್ದಾರೆ. ಆದ್ರೆ ಕೆ.ಎನ್ ರಾಜಣ್ಣ ಈ ಹೇಳಿಕೆ ಕಾಂಗ್ರೆಸ್ ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಈ ಮಧ್ಯೆ ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಮಾತನಾಡಿದ್ದು, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ..ಅವರು ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ.

ಅವರಿಗೆ ಯಾವುದೋ ಮಾಹಿತಿ ಇರಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಇಲ್ಲದಿದ್ರೆ ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹಾಗೆ ಮಾತನಾಡಲು ಆಗಲ್ಲ.ಹೀಗಾಗಿ ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಅವರನ್ನೇ ಕೇಳಿ.ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.










