• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಬಾರಿ ‘ಗ್ಯಾರಂಟಿ’ ಅವಕಾಶ ಕಳೆದುಕೊಳ್ತಾರಾ..? ಪ್ರಧಾನಿ ನರೇಂದ್ರ ಮೋದಿ..?

ಕೃಷ್ಣ ಮಣಿ by ಕೃಷ್ಣ ಮಣಿ
September 22, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಈ ಬಾರಿ ‘ಗ್ಯಾರಂಟಿ’ ಅವಕಾಶ ಕಳೆದುಕೊಳ್ತಾರಾ..? ಪ್ರಧಾನಿ ನರೇಂದ್ರ ಮೋದಿ..?
Share on WhatsAppShare on FacebookShare on Telegram

2014 ಹಾಗು 2019ರಲ್ಲಿ ಭರ್ಜರಿಯಾಗಿ ಜಯ ದಾಖಲಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ದೇಶದ ಚುಕ್ಕಾಣಿ ಹಿಡಿದಿದೆ. ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿದ ಖ್ಯಾತಿ ಹೊಂದಿದ್ದರೂ ಶೇಕಡ 50ಕ್ಕಿಂತ ಹೆಚ್ಚು ಮಂದಿ ಮೋದಿ ನೇತೃತ್ವದ ಸರ್ಕಾವರನ್ನು ವಿರೋಧಿಸಿದ್ದಾರೆ ಎನ್ನುವುದು ಚುನಾವಣಾ ಆಯೋಗದ ಮತ ಅಂಕಿಸಂಖ್ಯೆ ಸಾಬೀತು ಮಾಡಿದೆ. ಇದೀಗ ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಜೀವನ ನಿರ್ವಹಣೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಹೆಚ್ಚಳವಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ನೀಡಿದ್ದ ಭರವಸೆಗಳು ಹುಸಿಯಾಗಿವೆ ಎನ್ನುವುದು ವಿಪಕ್ಷಗಳ ಆರೋಪ ಆಗಿದೆ. ಹಾಗಾಗಿ ಈ ಬಾರಿ ದೇಶದ ಜನರು ಮೋದಿಯನ್ನು ಸೋಲಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಸಮಯದಲ್ಲಿ ಗ್ಯಾರಂಟಿ ಕೂಡ ಮೋದಿ ಕೈ ಹಿಡಿಯುವುದಿಲ್ಲ ಎನ್ನಬಹುದಾಗಿದೆ.

ADVERTISEMENT

ಕರ್ನಾಟಕದಲ್ಲಿ ಗ್ಯಾರಂಟಿಗೆ ಜೈಕಾರ.. ತೆಲಂಗಾಣದಲ್ಲೂ ಗ್ಯಾರಂಟಿ..

ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದ ಕಾಂಗ್ರೆಸ್​ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಏರಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಕರ್ನಾಟಕ ಕಾಂಗ್ರೆಸ್​​ ಸರ್ಕಾರ, ರಾಜ್ಯದಲ್ಲಿ ಒಟ್ಟು 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿ ಮಾಡಿದೆ. ಇನ್ನುಳಿದ ಪಧವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ ಹಾಗು ಡಿಪ್ಲೋಮಾ ಪಧವೀಧರಿಗೆ ಒಂದೂವರೆ ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡುವ ಯೋಜನೆಯನ್ನು ಮುಂಬರುವ ಡಿಸೆಂಬರ್​ನಿಂದ ಜಾರಿ ಮಾಡಲು ಸರ್ಕಾರ ಯೋಜನೆ ರೂಪಿಸಿದೆ. ಈ ಯೋಜನೆಗಳು ಕರ್ನಾಟಕದಲ್ಲಿ ಮೆಚ್ಚುಗೆ ಪಡೆದು ಮತಗಳನ್ನು ಸೆಳೆಯುವಲ್ಲಿ ಯಶಸ್ವಿ ಆಗಿದ್ದರಿಂದ ತೆಲಂಗಾಣದಲ್ಲೂ ಕಾಂಗ್ರೆಸ್​ ಗ್ಯಾರಂಟಿ ಅಸ್ತ್ರವನ್ನೇ ಪ್ರಯೋಗ ಮಾಡಿದೆ. 5 ಗ್ಯಾರಂಟಿ ಜೊತೆಗೆ ಇನ್ನೂ ಒಂದು ಗ್ಯಾರಂಟಿ ಸೇರಿ ಒಟ್ಟು 6 ಗ್ಯಾರಂಟಿ ನೀಡಲಾಗಿದೆ.

ಗ್ಯಾರಂಟಿಗಳನ್ನು ವಿರೋಧ ಮಾಡಿದೆ ಮೋದಿ ನೇತೃತ್ವದ ಸರ್ಕಾರ..!

ಗ್ಯಾರಂಟಿಗಳಿಂದ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತೇವೆ. ಬಡ ಜನರ ಕೈಗೆ ಹಣ ನೀಡಿದರೆ ಆ ಹಣ ಮತ್ತೆ ಮಾರುಕಟ್ಟೆಗೆ ಬರುತ್ತದೆ. ಈ ಮೂಲಕ ಮಾರುಕಟ್ಟೆ ಕೂಡ ಅಭಿವೃದ್ಧಿ ಆಗುತ್ತದೆ. ಹಣ ಚಲಾವಣೆ ಹೆಚ್ಚಳ ಆಗಿ ರಾಜ್ಯ ದೇಶದ ಅಭಿವೃದ್ಧಿ ಸಾಧ್ಯ ಎಂದು ಕಾಂಗ್ರೆಸ್​ ಹೇಳುತ್ತಿದ್ದರೆ, ಅತ್ತ ಮೋದಿ ನೇತೃತ್ವದ ಬಿಜೆಪಿ ಹಾಗು ಎನ್​ಡಿಎ ಮೈತ್ರಿಕೂಟ ಮಾತ್ರ ಇದೊಂದು ದೇಶದ ಆರ್ಥಿಕತೆಗೆ ಮಾರಕವಾಗಿರುವ ಗ್ಯಾರಂಟಿ ಯೋಜನೆ. ದೇಶದ ಸಂತಪ್ಪು ಭರಿದಾಗುತ್ತದೆ. ಈ ಮೂಲಕ ದೇಶದ ಅಭಿವೃದ್ಧಿ ಕುಂಠಿತ ಆಗುತ್ತದೆ. ಮತ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್​ ಈ ಕುತಂತ್ರ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದೆ. ಇದೀಗ ಲೋಕಸಭೆಗೂ ಕಾಂಗ್ರೆಸ್​ ಕೊಂಡೊಯ್ಯುವ ಸಾಧ್ಯತೆ ಹೆಚ್ಚಾಗಿದೆ. ಪರಿಸ್ಥಿತಿ ಹೀಗಿರುವಾಗ ಮೋದಿ ಯಾವ ಅಸ್ತ್ರ ಬಿಡುತ್ತಾರೆ ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ.

‘ಗ್ಯಾರಂಟಿ’ಗೆ ಎದುರಾಗಿ ಮೋದಿ ಯಾವ ಅಸ್ತ್ರ ಬಿಡುತ್ತಾರೆ..?

ರಾಜ್ಯ ಹಾಗು ಇಡೀ ದೇಶದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿ ಒಂದು ಕಡೆ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಿದೆ. ಅದೇ ಬಿಜೆಪಿ ಮತ್ತೊಂದು ಕಡೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಕಿಸಾನ್​ ಸಮ್ಮಾನ್​ ಯೋಜನೆ ಮೂಲಕ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ನೀಡಿದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನಸಹಾಯ ನೀಡುವ ಯೋಜನೆ ಚಾಲ್ತಿಯಲ್ಲಿದೆ. ಇದೀಗ ಗ್ಯಾರಂಟಿ ಯೋಜನೆಗೆ ಕಾಂಗ್ರೆಸ್​​ ಪಕ್ಷ ಬ್ಯಾಂಡ್​ ಅಂಬಾಸಿಟರ್​ ಆಗಿರುವ ಕಾರಣಕ್ಕೆ ಗ್ಯಾರಂಟಿ ಕೊಡುವುದಕ್ಕೆ ಕಾಂಗ್ರೆಸ್​ ಅರ್ಹವಾಗಿದೆ. ಇದು ದೇಶದ ಜನರನ್ನು ಸೆಳೆದರೂ ಅಚ್ಚರಿಯಿಲ್ಲ. ಆದರೆ ಇದೇ ಗ್ಯಾರಂಟಿ ಕೊಡುವುದಕ್ಕೆ ಬಿಜೆಪಿ ಪಕ್ಷ ಸಿದ್ಧವಾಗಿದ್ದರೂ ಗ್ಯಾರಂಟಿ ಅವಕಾಶವಿಲ್ಲ ಎನ್ನಬಹುದು.

ಕೃಷ್ಣಮಣಿ

Tags: BJPGuaranteeNarendra ModiTamilnadu
Previous Post

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡ್ತಿಲ್ಲ.. ರಾಜ್ಯ ಸರ್ಕಾರ ಏನ್ಮಾಡ್ಬೇಕು..?

Next Post

ನಮಗೆ ಕುಡಿಯಲು ನೀರಿಲ್ಲ, ರಾಜ್ಯಕ್ಕೆ ತಜ್ಞರ ತಂಡವನ್ನ ಕಳುಹಿಸಿ: ಎಂ.ಬಿ ಪಾಟೀಲ್‌

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ನಮಗೆ ಕುಡಿಯಲು ನೀರಿಲ್ಲ,  ರಾಜ್ಯಕ್ಕೆ ತಜ್ಞರ ತಂಡವನ್ನ ಕಳುಹಿಸಿ: ಎಂ.ಬಿ ಪಾಟೀಲ್‌

ನಮಗೆ ಕುಡಿಯಲು ನೀರಿಲ್ಲ, ರಾಜ್ಯಕ್ಕೆ ತಜ್ಞರ ತಂಡವನ್ನ ಕಳುಹಿಸಿ: ಎಂ.ಬಿ ಪಾಟೀಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada