• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ

Any Mind by Any Mind
November 25, 2021
in ಕರ್ನಾಟಕ, ದೇಶ
0
ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ
Share on WhatsAppShare on FacebookShare on Telegram

ವಿಲೀನಗೊಳಿಸುವ ಮೂಲಕ ದೇಶದಲ್ಲಿನ ರಾಷ್ಟ್ರೀಯಕೃತ ಬ್ಯಾಂಕುಗಳ ಸಂಖ್ಯೆಯನ್ನು ತಗ್ಗಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ ಈಗ, ಬ್ಯಾಂಕುಗಳ ಖಾಸಗೀಕರಣಕ್ಕೂ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ವಲಯದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಿದೆ. ಖಾಸಗೀಕರಣಗೊಳಿಸುವ ಬ್ಯಾಂಕುಗಳ ಪಟ್ಟಿಯಲ್ಲಿ ನಾಲ್ಕು ಹೆಸರುಗಳಿವೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಬ್ಯಾಂಕ್ ಆಫ್ ಇಂಡಿಯಾ- ಈ ನಾಲ್ಕು ಬ್ಯಾಂಕುಗಳ ಪೈಕಿ ಎರಡು ಬ್ಯಾಂಕುಗಳು ಮುಂದಿನ ವಿತ್ತೀಯ ವರ್ಷದಲ್ಲಿ ಖಾಸಗೀಕರಣಗೊಳ್ಳಲಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉದ್ದೇಶತ ಬ್ಯಾಂಕುಗಳ ನೌಕರರಿಗೆ ಆಕರ್ಷಕ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್ಎಸ್) ಘೋಷಿಸಿದೆ. ಬ್ಯಾಂಕಿಂಗ್ ನೌಕರರ ಸಂಘಟನೆಗಳು ಖಾಸಗೀಕರಣವನ್ನು ವಿರೋಧಿಸಿವೆ.

ADVERTISEMENT

ನವೆಂಬರ್ 29 ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ಮಂಡಿಸಲಿದೆ. ಎನ್ಡಿಟಿವಿ ವರದಿ ಪ್ರಕಾರ, ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಲಾಗಿರುವ 26 ಮಸೂದೆಗಳ ಪಟ್ಟಿಯಲ್ಲಿ ಪ್ರಸ್ತಾವಿತ ಪಟ್ಟಿಯಲ್ಲಿ ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆಯೂ ಸೇರಿವೆ.

ಬ್ಯಾಂಕಿಂಗ್ ಕಂಪನಿಗಳ 1970 ಮತ್ತು 1980 ( ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಮಾಡಬೇಕಾಗಿದೆ, ಮತ್ತು 1949ರ ಬ್ಯಾಂಕಿಂಗ್ ಕಾಯಿದೆಗೆ ಪ್ರಾಸಂಗಿಕ ತಿದ್ದುಪಡಿಗಳನ್ನು ಮಾಡಬೇಕಾಗಿದೆ.

ಅಧಿಕೃತ ಮೂಲಗಳ ಪ್ರಕಾರ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನುಮಂಡಿಸಿ, ಪರಿಗಣಿಸಿ ಮತ್ತು ಅಂಗೀಕಾರಿಸುವುದಕ್ಕಾಗಿ ಪಟ್ಟಿ ಮಾಡಲಾಗಿದೆ.

ಬಂಡವಾಳ ಹಿಂತೆಗೆದ ಯೋಜನೆಯಡಿ ಪ್ರಸಕ್ತ ವಿತ್ತೀಯ ವರ್ಷ 2021-22ದಲ್ಲಿ 1.75 ಲಕ್ಷ ಕೋಟಿ ರುಪಾಯಿ ಸಂಗ್ರಹಿಸುವ ಗುರಿಯನ್ನು ಸಾಧಿಸಲು ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಾಗಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ್ದರು.

ಇದಲ್ಲದೇ, ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಪೈಕಿ ಮತ್ತೊಂದು ಮಹತ್ವದ ಮಸೂದೆಯೆಂದರೆ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2021 ಸೇರಿದೆ.

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ಅನ್ನು ಪ್ರತ್ಯೇಕಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಕಾಯ್ದೆಯನ್ನು ತಿದ್ದುಪಡಿ ಮಾಡುವುದು ಮಸೂದೆಯ ಉದ್ದೇಶವಾಗಿದೆ.

ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ವಿಸ್ತರಿಸುವ ಮತ್ತು ಪಿಎಫ್ಆರ್ಡಿಎ ಬಲಪಡಿಸಲು ವಿತ್ತ ಸಚಿವರ 2020 ರ ಬಜೆಟ್ ಘೋಷಿತ ಭರವಸೆಯನ್ನು ಉದ್ದೇಶಿತ ಮಸೂದೆಯು ಪೂರೈಸುತ್ತದೆ. ಪಿಎಫ್ಆರ್ಡಿಎ ಕಾಯಿದೆ ತಿದ್ದುಪಡಿಯೊಂದಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಟ್ರಸ್ಟ್ ನ ಅಧಿಕಾರಗಳು, ಕಾರ್ಯಗಳು ಮತ್ತು ಕರ್ತವ್ಯಗಳು, ಪ್ರಸ್ತುತ ಪಿಎಫ್ಆರ್ಡಿಎ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್) ನಿಯಮಗಳು 2015 ರ ಅಡಿಯಲ್ಲಿ ನಿಗದಿಪಡಿಸಲಾಗಿದ್ದು, ತಿದ್ದುಪಡಿಯ ನಂತರ ಇದು ಚಾರಿಟಬಲ್ ಟ್ರಸ್ಟ್ ಅಥವಾ ಕಂಪನಿಗಳ ಕಾಯಿದೆಯ ಅಡಿಯಲ್ಲಿ ಬರಬಹುದಾಗಿದೆ. ರಾಷ್ಟ್ರೀಯ ಪಿಂಚಣಿ ಯೋಜನೆ ಟ್ರಸ್ಟ್ ಅನ್ನು ಪಿಂಚಣಿ ನಿಯಂತ್ರಣ ವ್ಯಾಪ್ತಿಯಿಂದ ಪ್ರತ್ಯೇಕವಾಗಿರಿಸುವುದು ಮತ್ತು ಹದಿನೈದು ಸದಸ್ಯ ಬಲದ ಆಡಳಿತ ಮಂಡಳಿಯಿಂದ ನಿರ್ವಹಿಸುವ ಉದ್ದೇಶವನ್ನು ಉದ್ದೇಶಿತ ಮಸೂದೆಯು ಹೊಂದಿದೆ. ಪಿಂಚಣಿ ಕಾಪು ನಿಧಿಗೆ ಹೆಚ್ಚು ದೇಣಿಗೆ ನೀಡುವ ವಲಯಕ್ಕೆ ಆಡಳಿತ ಮಂಡಳಿಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ಲಭ್ಯವಾಗಲಿದೆ.

Tags: Bank privatisationBJPCongress PartyCovid 19Nationalised Banksನರೇಂದ್ರ ಮೋದಿಬಿಜೆಪಿ
Previous Post

ಮಳೆ ಅವಾಂತರ ತಡೆಯಲು ಸಿಎಂ ಬೊಮ್ಮಾಯಿ ಬಿಬಿಎಂಪಿಯಲ್ಲಿ ಸಭೆ : ನಗರದ ನೀರುಗಾವಲು ಪುನರ್ ನಿರ್ಮಾಣಕ್ಕೆ ಸಿಎಂ ಸೂಚನೆ !

Next Post

2022ರಲ್ಲೂ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ; ಟೈಮ್ಸ್ ನೌ ಸಮೀಕ್ಷೆ ಹೇಳ್ತಿರೋದೇನು?

Related Posts

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
0

ದಾವಣಗೆರೆ: ಸಾಮಾಜಿಕ ಕಾರ್ಯಕರ್ತನ ಮೇಲೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕರನ್ನು ಬಂಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದ...

Read moreDetails
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
Next Post
2022ರಲ್ಲೂ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ; ಟೈಮ್ಸ್ ನೌ ಸಮೀಕ್ಷೆ ಹೇಳ್ತಿರೋದೇನು?

2022ರಲ್ಲೂ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ; ಟೈಮ್ಸ್ ನೌ ಸಮೀಕ್ಷೆ ಹೇಳ್ತಿರೋದೇನು?

Please login to join discussion

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!