
ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದು, ಅಧಿವೇಶನದ ಬಗ್ಗೆ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು 10.30ಕ್ಕೆ ಅನುಭವ ಮಂಟಪದ ಭಾವಚಿತ್ರ ಅನಾವರಣಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.ಅದಾದ ಬಳಿಕ ಹೊಸದಾಗಿ ಆಯ್ಕೆಯಾದ ಮೂವರು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದಿದ್ದಾರೆ.

ಬೆಳಗ್ಗೆ ಪ್ರಶ್ನೋತ್ತರ ಕಲಾಪ ನಡೆಯಲಿದ್ದು, ಮಧ್ಯಾಹ್ನದ ಬಳಿಕ ಬಿಎಸ್ಇ ಸಭೆಯಲ್ಲಿ ಸದನದ ಕಾರ್ಯ ಕಲಾಪಗಳ ಬಗ್ಗೆ ಚರ್ಚೆ ನಡೆಯಲಿದೆ.ಐದು ವಿಧೇಯಕಗಳು ಸರ್ಕಾರದಿಂದ ಪ್ರಸ್ತಾಪ ಆಗಲಿದ್ದು, ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ, ಸರಕು ಸಾಗಾಣಿಕೆ ತಿದ್ದುಪಡಿ ಕಾಯ್ದೆ ಮಂಡನೆ ಆಗಲಿವೆ.
ಶಾಸಕರು ಮೂರು ಖಾಸಗಿ ಬಿಲ್‌ಗಳನ್ನು ಮಂಡನೆ ಮಾಡಲಿದ್ದಾರೆ, ಸುವರ್ಣಸೌಧದಲ್ಲಿ ಸಭಾಧ್ಯಕ್ಷರ ಪೀಠವನ್ನು ನಿರ್ಮಾಣ ಮಾಡಲಾಗಿದೆ. 8 ಸಾವಿರ ಜನರು ಬೆಳಗಾವಿ ಅಧಿವೇಶನಕ್ಕೆ ಬರ್ತಾರೆ. ಎಲ್ಲರಿಗೂ ಊಟ, ವಸತಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಅಧಿವೇಶನದ ಭದ್ರತೆಗಾಗಿ 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.
ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲು ಅವಕಾಶಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಅಧಿವೇಶನ ಯಾವ ರೀತಿ ನಡೆಯಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆ ಮಾಡುತ್ತೇವೆ. ಸಭೆಯಲ್ಲಿ ಸಿಎಂ, ವಿರೋಧ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ. ಉತ್ತರ ಕರ್ನಾಟಕ, ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು.ಸಮಗ್ರ ಕರ್ನಾಟಕದ ಚರ್ಚೆ ಸುವರ್ಣ ಸೌಧದಲ್ಲಿ ನಡೆಯಬೇಕು.ಆದರೆ ಹೆಚ್ಚಿನ ಪ್ರಾಶಸ್ತ್ಯ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ನೀಡಲಾಗುವುದು ಅಂತಾ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾದ ಬಗ್ಗೆ ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡ್ತಿವಿ. ಹತ್ತು ದಿನ ಬದಲಾಗಿ ಹೆಚ್ಚಿನ ದಿನಗಳ ಕಾಲ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಅವಕಾಶ ಇದೆ. ಈ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡ್ತಿವಿ ಎಂದಿದ್ದಾರೆ.