ಇಂದು ಪ್ರಧಾನಿ ನರೇಂದ್ರ ಮೋದಿ (Pm modi) 75 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಹುಟ್ಟುಹಬ್ಬದ ಶುಭಾಷಯ ತಿಳಿಸಿದ್ದಾರೆ. ಭಾರತದ ಮೇಲೆ ಮನಸ್ಸಿಗೆ ಬಂದ ಹಾಗೇ ಸುಂಕ (Tarrif) ಏರಿಸಿದ್ದ ಟ್ರಂಪ್, ಇಂದು (ಸೆ.17) ಪ್ರಧಾನಿ ನರೇಂದ್ರ ಮೋದಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ರುತ್ನಲ್ಲಿ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ನನ್ನ ಸ್ನೇಹಿತ ನರೇಂದ್ರ ಮೋದಿಗೆ ಫೋನ್ ಕರೆ ಮಾಡಿ ಜನ್ಮದಿನದ ಶುಭಾಶಯಗಳನ್ನು ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ, ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಡೊನಾಲ್ಡ್ ಟ್ರಂಪ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಧನ್ಯವಾದಗಳು ಸ್ನೇಹಿತ ಎಂದಿದ್ದಾರೆ.