ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಕುಟುಂಬಸ್ಥರು ಮಹಿಳೆಯನ್ನು ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರಪ್ರದೇಶದ ಮಹೋಬಾದಲ್ಲಿ ಮಹೋಬಾದಲಿ ನಡೆದಿದೆ.
ಸದ್ಯ ಮಹಿಳೆಯ ಸ್ಥಿತಿ ಚಿಂತಜನಕಾವಾಗಿದ್ದು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ಘಟನೆ ಗುರುವಾರ ರಾತ್ರಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಮಹಿಳೆ ಮೇಲೆ ಆಕೆಯ ಪತಿ, ಅತ್ತೆ ಹಾಗು ಮಾವ ಕೋಲಿನಿಂದ ಆಕೆಯ ಮೇಲೆ ಅಮಾನುಚವಾಗಿ ಹ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಮುಂದುವರೆದು, ಮಹಿಳೆಗೆ ಈಗಾಗಲೇ 7 ವರ್ಷ ಹಾಗು 2 ವರ್ಷ ವಯಸ್ಸಿನ ಎರಡು ಹೆಣ್ಣು ಮಕ್ಕಳಿದ್ದು ಮಹಿಳೆಯ ಮೇಲೆ ಬಡಗಿಯಿಂದ ತೀವ್ರವಾಗಿ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಲಾಗಿತ್ತು. ಸದ್ಯ ಮಹಿಳೆಯ ಸ್ಥಿತಿ ಚಿಂತಜನಕಾವಾಗಿದ್ದು ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸದ್ಯ ಕುಟುಂಬ ಸದಸ್ಯರು ತಲೆಮಾರಿಸಿಕೊಂಡಿದ್ದು ಅವರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಐಪಿಸಿ ಸೆಕ್ಷನ್ 307(ಕೊಲೆ ಯತ್ನ)ದಡಿ ಪ್ರಕರಣವನ್ನ ದಾಖಲಿಸಲಾಗಿದೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೋಗಳು ವೈರಲ್ ಆಗಿದ್ದು ಹಲ್ಲೆಕೋರರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.