ಜಾರ್ಖಂಡ್ನ ರಾಜಧಾನಿ ರಾಂಚಿಯಲ್ಲಿ ತಡರಾತ್ರಿ ತಪಾಸಣೆ ನಡೆಸುತ್ತಿದ್ದ ವೇಳೆ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಮೇಲೆ ಜೀಪು ಹತ್ತಿಸಿ ಕೊಲೆ ಮಾಡಲಾಗಿದೆ.
ಮೃತ ಅಧಿಕಾರಿಯನ್ನು ಸಂಧ್ಯಾ ಟೋಪ್ನೋ ಎಂದು ಗುರುತಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಂಚಿ SSP ಕೌಶಲ್ ಕಿಶೋರ್ ಅಧಿಕಾರಿಗೆ ಮೊದಲು ಜಾನವಾರು ಕಳ್ಳಸಾಗಾಣೆ ಬಗ್ಗೆ ಕಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದಾರೆ.
ವಾಹನ ಕಂಡ ತಕ್ಷಣ ನಿಲ್ಲಿಸುವಂತೆ ಸೂಚಿಸಿದ್ದಾರೆ ಆದರೆ ಚಾಲಕ ಉದ್ದೇಶಪೂರ್ವಕವಾಗಿ ಆಕೆಯ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ್ದಾನೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತರಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಚಾಲಕ ಹಾಗೂ ವಾಹನ ಎರಡನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು SSP ಹೇಳಿದ್ದಾರೆ.