• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶದ ಅಭಿವೃದ್ಧಿ : ಸಚಿವೆ ಹೆಬ್ಬಾಳ್ಕರ್‌ ಮಾಹಿತಿ..

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Share on WhatsAppShare on FacebookShare on Telegram

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.‌

ADVERTISEMENT
Niketh Raj Maurya DK Shivakumar : ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಡಿಕೆಶಿ ಅತ್ಯುತ್ತಮ ಅಧ್ಯಕ್ಷರಾಗಿ ಉಳೀತಾರೆ..

ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ (Assmebly Budget Session) ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ (Helpers) ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವೆ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಎಂದು ಹೆಬ್ಬಾಳ್ಕರ್‌ ಹೇಳಿದ್ದಾರೆ.

ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ..

ಇನ್ನೂ ಇದೇ ವೇಳೆ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆಯ ಕುರಿತ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್‌, ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

,ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ,‌ ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಸಮಿತಿ ಸಭೆಯನ್ನು ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿರುವುದೇ ಮಹಿಳಾ ಸಬಲೀಕರಣಕ್ಕಾಗಿ. ಜೊತೆಗೆ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.‌

ಉದ್ಯೋಗಿ‌ನಿ ಯೋಜನೆಯ ಸಹಾಯಧನ ತಲುಪಲು ಬ್ಯಾಂಕ್‌ಗಳು ಕೂಡ ಸರಿಯಾಗಿ ಸಹಕರಿಸುತ್ತಿಲ್ಲ. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಲ್ಲಿ ಸಿಬಿಲ್‌ ಸ್ಕೋರ್‌ ಆಧಾರದ ಮೇಲೆ ಬ್ಯಾಂಕ್‌ಗಳೂ ಫಲಾನುಭವಿಗಳನ್ನು ಆಯ್ಕೆ ಮಾಡಲು ವಿಳಂಬ ಮಾಡುತ್ತಿವೆ.‌ ಈ ಕುರಿತು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಬ್ಯಾಂಕ್ಸ್ (SLBC) ಕಮಿಟಿಯಲ್ಲಿ ಈ ಸಂಬಂಧ ಸಾಲ ಮಂಜೂರಾತಿಯನ್ನು ತುರ್ತಾಗಿ ಕ್ರಮವಹಿಸಲು ತಿಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸದನಕ್ಕೆ ಮಾಹಿತಿ ನೀಡಿದ್ದಾರೆ.

Tags: Anaganwadi vacancies fillingBelagavi Rural MLABudget sessionCivil ScoreCM Siddaramaiahcongress karnatakaGovernment of KarnatakaGurme Suresh shettyKaapu ConstituencyKaarnataka Politicskannada newslaxmi hebbalkarPratidhvaniUdupi Angagawadisudyogini SchemeWomen and child Department minister
Previous Post

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

Next Post

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada