ರಾಜ್ಯ ಸರ್ಕಾರದ ಪ್ರಮುಖ ಗ್ಯಾರೆಂಟಿ ಯೋಜನೆಗಳ (Guarantee scheme) ಪೈಕಿ ಒಂದಾದ ಗೃಹಲಕ್ಷ್ಮಿ (Gurha lakshmi) ಯೋಜನೆಯ ಹಣ ಕಳೆದ ಎರಡು ತಿಂಗಳಿಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಖಾತೆಗೆ ಹಣ ಜಮಾ ಮಾಡಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಆದ್ರೆ ಸದ್ಯಕ್ಕೆ ಹಣ ಪಾವತಿ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ತಕ್ಷಣಕ್ಕೆ ಮಹಿಳೆಯರ ಖಾತೆಗೆ ಜಮೆ ಆಗುವುದಿಲ್ಲ ಎನ್ನಲಾಗುತ್ತಿದೆ.
ಯಾಕಂದ್ರೆ IT/GST ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಕೆಲ ಫಲಾನುಭವಿಗಳ ದತ್ತಾಂಶದ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಹೀಗಾಗಿ ಈ ಪರಿಶೀಲನೆಯ ನಂತರ ಫಲಾನುಭವಿಗಳಿಗೆ ಹಣ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆ ನಡೆದಿದ್ಯಂತೆ.

ಹೀಗಾಗಿ ಯೋಜನೆಯಿಂದ ಟ್ಯಾಕ್ಸ್ ಪೇಯಿ (Tax payee) ಮಹಿಳೆಯರನ್ನು ಕೈಬಿಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಯುತ್ತಿದ್ದು ಕೆಲ ಮಹಿಳೆಯರಿಗೆ ಯೋಜನೆಯಿಂದ ಹೊರ ಉಳಿಯುವ ಸಾಧ್ಯತೆಯಿದೆ. ಹೀಗಾಗಿ ಗೃಹಲಕ್ಷ್ಮಿ ಹಣ ಪಾವತಿ ಸದ್ಯಕ್ಕೆ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.