ವಿಜಯಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
50 ವರ್ಷ ವಯೋಮಾನದ ಈ ಮಹಿಳೆ (ರೋಗಿ ಸಂಖ್ಯೆ 3997212) ಯು ಟಿಬಿ ಮತ್ತು ತೀವ್ರ ಉಸಿರಾಟ ತೊಂದರೆಯಿಂದಾಗಿ ಚಿಕಿತ್ಸೆ ಪಡೆಯಲು ಕಳೆದ ಏಪ್ರೀಲ್ 5ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದಾರೆ.
ಶಿಷ್ಟಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.







