• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉತ್ತರ ಕನ್ನಡದಲ್ಲಿ ಹೆಚ್ಚಾಯ್ತು ಮಹಿಳೆ, ಯುವತಿಯರ ನಾಪತ್ತೆ ಕೇಸುಗಳು; ಚುರುಕುಗೊಂಡ ಪೊಲೀಸ್ ತನಿಖೆ

ನಚಿಕೇತು by ನಚಿಕೇತು
November 30, 2021
in ಕರ್ನಾಟಕ
0
ಉತ್ತರ ಕನ್ನಡದಲ್ಲಿ ಹೆಚ್ಚಾಯ್ತು ಮಹಿಳೆ, ಯುವತಿಯರ ನಾಪತ್ತೆ ಕೇಸುಗಳು; ಚುರುಕುಗೊಂಡ ಪೊಲೀಸ್ ತನಿಖೆ
Share on WhatsAppShare on FacebookShare on Telegram

ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ನಾಪತ್ತೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಾಲೇಜು ಯುವತಿಯರು, ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಮರೆಯಾಗುತ್ತಿದ್ದಾರೆ. ಇನ್ನು ಪ್ರಸಕ್ತ ವರ್ಷದಲ್ಲಿ ಯುವತಿಯರ ಮಿಸ್ಸಿಂಗ್ ಕೇಸ್‌ಗಳು ಹೆಚ್ಚಾಗಿದ್ದು ಜಿಲ್ಲೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಇದನ್ನ ಭೇದಿಸೋಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ರಾಜ್ಯದಲ್ಲೇ ಶಾಂತ ಜಿಲ್ಲೆ ಎನ್ನುವ ಹೆಸರು ಉತ್ತರ ಕನ್ನಡ ಜಿಲ್ಲೆಗಿದೆ. ಈ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕೂಡಾ ವಿರಳ. ಆದ್ರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಯುವತಿಯರು, ಮಹಿಳೆಯರ ನಾಪತ್ತೆ ಪ್ರಕರಣಗಳು ಸಾಕಷ್ಟು ಸದ್ದು ಮಾಡುತ್ತಿವೆ. ಕಳೆದ 11 ತಿಂಗಳ ಅವಧಿಯಲ್ಲೇ ಇನ್ನೂರಕ್ಕೂ ಅಧಿಕ ನಾಪತ್ತೆ ಪ್ರಕರಣಗಳು ದಾಖಲಾಗಿವೆ.

ಇನ್ನು ಬಹುತೇಕ ಪ್ರಕರಣಗಳು ಗ್ರಾಮೀಣ ಭಾಗದಲ್ಲೇ ನಡೆದಿರೋದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕೊರೊನಾ ಸೋಂಕಿನ ಮೊದಲ ಅಲೆ ವೇಳೆಯಲ್ಲೇ ಯುವತಿಯರ ಮಿಸ್ಸಿಂಗ್ ಕೇಸ್‌ಗಳ ಸಂಖ್ಯೆ ಹೆಚ್ಚಳವಾಗಿವೆ.

2019ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 257 ಯುವತಿಯರು ನಾಪತ್ತೆ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ನಾಪತ್ತೆಯಾಗಿದ್ದ 236 ಯುವತಿಯರನ್ನ ಪತ್ತೆ ಹಚ್ಚಲಾಗಿದೆ. ಅದರಲ್ಲಿ ಇನ್ನೂ 21 ಪ್ರಕರಣಗಳು ಪೊಲೀಸರ ತನಿಖೆಯಲ್ಲಿವೆ. ಇನ್ನು 2020ರ ಕೋವಿಡ್ ಲಾಕ್‌ಡೌನ್ ಅವಧಿಯಲ್ಲೇ 212 ನಾಪತ್ತೆ ಕೇಸ್‌ಗಳು ದಾಖಲಾಗಿದ್ದವು. ಈ ಕೇಸ್‌ಗಳಲ್ಲಿ 197 ಮಂದಿಯನ್ನ ಪತ್ತೆ ಮಾಡಲಾಗಿದೆ.

ADVERTISEMENT

ಇನ್ನೂ 15 ಮಂದಿ ಯುವತಿಯರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಇನ್ನು ಕಳೆದೆರಡು ವರ್ಷದಲ್ಲಿ ನಾಪತ್ತೆ ಪ್ರಕರಣದ ಅಂಕಿ-ಅಂಶ ಕಡಿಮೆಯಾಗಿತ್ತು. ಆದ್ರೆ, ಪ್ರಸ್ತುತ 2021ರ ಅಂಕಿ-ಅಂಶ ಆತಂಕ ಮೂಡಿಸುವಂತಿದೆ. 2021ರಲ್ಲಿ ನವೆಂಬರ್ ಹೊರತುಪಡಿಸಿ 11 ತಿಂಗಳ ಅವಧಿಯಲ್ಲೇ 232 ಪ್ರಕರಣ ದಾಖಲಾಗಿವೆ.

ಈ ಎಲ್ಲ ಅಂಕಿ ಅಂಶಗಳನ್ನ ಗಮನಿಸಿದಾಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಯುವತಿಯರ ನಾಪತ್ತೆ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಅಂತಾರೇ ಸ್ಥಳೀಯರು.

ಇನ್ನು ನಾಪತ್ತೆ ಪ್ರಕರಣಗಳಲ್ಲಿ ಬಹುತೇಕ ಕೇಸ್‌ಗಳು ಪ್ರೀತಿ-ಪ್ರೇಮ, ಅನೈತಿಕ ಸಂಬಂಧದಂತಹ ವೈಯಕ್ತಿಕ ಕಾರಣಗಳಿಂದಾಗಿ ಮನೆಬಿಟ್ಟು ಹೋದವರಾಗಿದ್ದಾರೆ‌. ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿ ಅಪಹರಣದ ಶಂಕೆ ಇದ್ದು, ಇನ್ನೂ ಕೆಲವರು ಮಾನಸಿಕವಾಗಿ ಅಸ್ವಸ್ಥಗೊಂಡು ನಾಪತ್ತೆಯಾಗಿದ್ದಾರೆ ಅನ್ನೋದು ತಿಳಿದುಬಂದಿದೆ.

ನಾಪತ್ತೆ ಪ್ರಕರಣಗಳಲ್ಲಿ ವಿವಾಹಿತ ಮಹಿಳೆಯರು, ಶಾಲಾ-ಕಾಲೇಜು ಯುವತಿಯರು ಹೆಚ್ಚಾಗಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳೇ ಕಾರಣ ಎನ್ನಲಾಗಿದೆ. ಇನ್ನು ಈ ಬಗ್ಗೆ ದಿಟ್ಟ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದಾಗಿದ್ದಾರೆ. ಜೊತೆಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲೇ ಯುವತಿಯರ ನಾಪತ್ತೆ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರೋದು ಆತಂಕಕಾರಿಯಾಗಿದೆ. ಹೀಗಾಗಿ ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಪಾಲಕರೂ ಸಹ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.

Tags: Missing casesUttara Kannada Districtwomens
Previous Post

ಸರ್ಕಾರದ ಎದುರು ಕುಂಯ್ ಕುಂಯ್ ಎನ್ನುವ KOO app: ಬಿಜೆಪಿಯಿಂದ, ಬಿಜೆಪಿಗಾಗಿ, ಬಿಜೆಪಿಗೋಸ್ಕರ….

Next Post

ಮಂಡ್ಯ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿ ನಿಲ್ಲಿಸಲು ಮುಂದಾಯ್ತ ಜೆಡಿಎಸ್?

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಮಂಡ್ಯ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿ ನಿಲ್ಲಿಸಲು ಮುಂದಾಯ್ತ ಜೆಡಿಎಸ್?

ಮಂಡ್ಯ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿ ನಿಲ್ಲಿಸಲು ಮುಂದಾಯ್ತ ಜೆಡಿಎಸ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada