ಇಡೀ ವಿಶ್ವವೇ ಕಾಯುತ್ತಿರುವ ಭಾರತ – ಆಸ್ಟ್ರೇಲಿಯಾ ಏಕದಿನ ವಿಶ್ವಪಕ್ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಲಕ್ಷಕ್ಕೂ ಹೆಚ್ಚು ಅಭಿಮಾನಿಗಳ ನೆರೆದಿದ್ದಾರೆ. ಅಂತಿಮ ಮುಖಾಮುಖಿಯಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ಭಾರತ ತಂಡವು ಫೈನಲ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ ಫೈನಲ್ ನಲ್ಲಿ ಆಡಿದ ತಂಡವೇ ಇಂದು ಆಡುತ್ತಿದೆ. ಪಂದ್ಯವು 2 ಗಂಟೆಗೆ ಆರಂಭವಾಗಲಿದೆ.
ಫೈನಲ್ ಪಂದ್ಯದ ತಂಡಗಳು
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್ (ವಿ.ಕೀ), ಪ್ಯಾಟ್ ಕಮಿನ್ಸ್ (ನಾ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್