ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ – ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯಾದ್ಯಂತ ಜಿಲ್ಲಾ ಕ್ರೀಡಾಂಗಣಗಳಲ್ಲಿ LED ಪರದೆಯಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.
ಈ ಸಂಬಂಧ ಬೆಂಗಳೂರು ಕ್ರೀಡಾ ಇಲಾಖೆಯ ಆಯುಕ್ತರು, ಎಲ್ಲಾ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದು, ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ದೊಡ್ಡ ಎಲ್ ಇಡಿ ಪರದೆ, ಅದಕ್ಕೆ ಬೇಕಾದ ಸೌಂಡ್ ವ್ಯವಸ್ಥೆ, ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.
ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಹೊರಡಿಸುವ ಸುತ್ತೋಲೆ ಪತ್ರದಲ್ಲಿ, ದಿನಾಂಕ: 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದ. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು ಎಂದು ತಿಳಿದಿದೆ.